ಯಡಿಯೂರಪ್ಪ `ಅಭಿಮಾನೋತ್ಸವ' ಕಾರ್ಯಕ್ರಮ ಪೂರ್ವಭಾವಿ ಸಭೆ
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ : ವಿಜಯೋತ್ಸವ, ಸಂಭ್ರಮಾಚರಣೆ
ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ವಿಜಯೋತ್ಸವದೊಂದಿಗೆ ಸಂಭ್ರಮಾಚರಣೆ ನಡೆಸಲಾಯಿತು.
ಭದ್ರಾವತಿ : ರೈತ ನಾಯಕ, ಜನ ನಾಯಕ, ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಭೆ ಸೋಮವಾರ ನಗರದ ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾಗಿತ್ತು.
ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗು ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಸ್ ತೀರ್ಥಯ್ಯ ಸಭೆಯ ನೇತೃತ್ವವಹಿಸಿ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಗಳ ಕುರಿತು ಚರ್ಚಿಸಲಾಯಿತು. ಅಲ್ಲದೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ವೀಕ್ಷಣೆ ಮಾಡಲಾಯಿತು.
ಬಿಜೆಪಿ ಗೆಲವು : ವಿಜಯೋತ್ಸವ
ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಯವರ ನೇತೃತ್ವದಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ನಡೆಸಿದರು.
ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಹಳೇ ಸೇತುವೆ ಮಾರ್ಗವಾಗಿ ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದವರೆಗೆ ಬೈಕ್ ರ್‍ಯಾಲಿ ನಡೆಸಿ ನಂತರ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಮುಖಂಡರಾದ ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ಎಂ. ಮಂಜುನಾಥ್, ಬಿ.ಜಿ ರಾಮಲಿಂಗಯ್ಯ, ಚನ್ನೇಶ್, ರಘುರಾವ್, ಮೊಸರಳ್ಳಿ ಅಣ್ಣಪ್ಪ, ಹನುಮಂತ ನಾಯ್ಕ, ಅವಿನಾಶ್, ಪ್ರದೀಪ್ ಗೌಡರ್, ಸುಬ್ಬಣ್ಣ, ರಾಜಶೇಖರ್, ಜಿ.ವಿ ಕುಮಾರ್, ಸತೀಶ್ ಕುಮಾರ್, ಮಹಿಳಾ ಪ್ರಮುಖರಾದ sಸರಸ್ವತಿ, ಅನ್ನಪೂರ್ಣ, ಶಕುಂತಲಾ ಪ್ರದೀಪ್, ನಾಗಮಣಿ, ಲತಾ ಪ್ರಭಾಕರ್, ಕವಿತಾ ರಾವ್, ಆಶಾ ಪುಟ್ಟಸ್ವಾಮಿ, ಉಷಾ ವೀರಶೇಕರ್, ಉಮಾವತಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ರೈತ ನಾಯಕ, ಜನ ನಾಯಕ, ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಭೆ ಸೋಮವಾರ ಭದ್ರಾವತಿ ನಗರದ ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾಗಿತ್ತು.

.jpeg)