ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿ : ಶಾರದ ಅಪ್ಪಾಜಿ ನೇತೃತ್ವದ ತಂಡ ಪರಿಶೀಲನೆ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಭದ್ರಾವತಿ ಕ್ಷೇತ್ರದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಸೋಮವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಭದ್ರಾವತಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕ್ಷೇತ್ರದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಸೋಮವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಂಜೆ ವೇಳೆ ಗುಡುಗು ಸಹಿತ ಗಾಳಿ ಮಳೆಯಾಗುತ್ತಿದ್ದು, ನಗರ ಹಾಗು ಗ್ರಾಮೀಣ ಭಾಗದಲ್ಲಿ ಹಾನಿ ಉಂಟಾಗಿದೆ. ಹಳ್ಳಕೊಳ್ಳಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಗಾಳಿ ಮಳೆಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿ ಬಿದ್ದಿವೆ. ಕೆಲವೆಡೆ ಮನೆಯ ಮೇಲ್ಛಾವಣಿಗಳು ಹಾರಿ ಹೋಗಿರುವ ಘಟನೆಗಳು ನಡೆದಿವೆ. ಅಲ್ಲದೆ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿದ್ದು, ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಪರದಾಡುವಂತಾಗಿದೆ. ಎಲ್ಲೆಡೆ ಭತ್ತದ ಕೊಯ್ಲು ಆರಂಭಗೊಂಡಿದ್ದು, ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಭಂಡಾರಹಳ್ಳಿ ರೈತ ಶ್ರೀಧರ್‌ರವರು ೧ ಎಕರೆ ಜಮೀನಿನಲ್ಲಿ ಕೊಯ್ಲು ಮಾಡಿದ್ದ ಭತ್ತಕ್ಕೆ ಮಳೆಯಿಂದ ಹಾನಿಯಾಗಿದೆ. ತಾಲೂಕಿನ ಕೂಡ್ಲಿಗೆರೆ, ಹೊಳೆಹೊನ್ನೂರು ಭಾಗದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಭದ್ರಾವತಿ ಭಂಡಾರಹಳ್ಳಿ ರೈತ ಶ್ರೀಧರ್‌ರವರು ೧ ಎಕರೆ ಜಮೀನಿನಲ್ಲಿ ಕೊಯ್ಲು ಮಾಡಿದ್ದ ಭತ್ತಕ್ಕೆ ಮಳೆಯಿಂದ ಹಾನಿಯಾಗಿದೆ.
ಶಾರದ ಅಪ್ಪಾಜಿ ನೇತೃತ್ವದ ತಂಡ ಪರಿಶೀಲನೆ:
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೂಡ್ಲಿಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಾಗತಿಬೆಳಗಲು ಹಾಗೂ ನಾಗತಿಬೆಳಗಲು ತಾಂಡ್ಯ ಗ್ರಾಮಗಳಿಗೆ ತೆರಳಿದ ತಂಡ ಸಂಕಷ್ಠಗಳಿಗೆ ಸ್ಪಂದಿಸಿತು. ಜಿಲ್ಲಾಡಳಿತ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ತಕ್ಷಣ ಮುಂದಾಗುವಂತೆ ಮನವಿ ಮಾಡಿತು.
ಪಕ್ಷದ ಗ್ರಾಮಾಂತರ ಅಧ್ಯಕ್ಷ ಟಿ ಚಂದ್ರೇಗೌಡ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಮಧುಸೂಧನ್, ತಾಲೂಕು ಘಟಕದ ಕಾರ್ಯದರ್ಶಿ ಎಸ್. ಭಾಗ್ಯಮ್ಮ ಮಂಜುನಾಥ್ ಸೇರಿದಂತೆ ಇನ್ನಿತರರು ತಂಡದಲ್ಲಿ ಉಪಸ್ಥಿತರಿದ್ದರು.

.jpeg)