ತಳ್ಳಿಕಟ್ಟೆ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ : ಲಕ್ಷಾಂತರ ರು. ಹಾನಿ

ಸ್ಥಳಕ್ಕೆ ಶಾಸಕ ಸಂಗಮೇಶ್ವರ್ ಭೇಟಿ, ಸ್ಥಳದಲ್ಲಿಯೇ ೫೦ ಸಾವಿರ ರು. ನೆರವು 


ಭದ್ರಾವತಿ ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ. 
    ಭದ್ರಾವತಿ : ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ. 
    ಗ್ರಾಮದ ನಿವಾಸಿ ಹಾಲಪ್ಪರವರ ಶ್ರೀ ಏಳು ಕೋಟಿ ನಿಲಯದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದ ಮೆನೆಯ ಮೇಲ್ಛಾವಣಿ ಹಾಗು ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ. 
    

ಭದ್ರಾವತಿ  ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ತಹಸೀಲ್ದಾರ್ ಪರುಸಪ್ಪ ಕುರುಬರ ಅವರು ನೋಂದ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
    ೫೦ ಸಾವಿರ ರು. ನೆರವು: 
    ಘಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ತಹಸೀಲ್ದಾರ್ ಪರುಸಪ್ಪ ಕುರುಬರ ಅವರು ನೋಂದ ಕುಟುಂಬಸ್ಥರಿಗೆ ಧೈರ್ಯ ತುಂಬುವ ಮೂಲಕ ತಕ್ಷಣ ಸ್ಥಳದಲ್ಲಿಯೇ ೫೦ ಸಾವಿರ ರು. ನೆರವು ನೀಡಿದರು. ಅಲ್ಲದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚಿನ ನೆರವು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸಂಗಮೇಶ್ವರ್ ಸೂಚಿಸಿದರು.