ಮೇ.೨೦ರಂದು ಕೆಡಿಪಿ ಸಭೆ 


    ಭದ್ರಾವತಿ : ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮೇ.೨೦ರ ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದಾರೆ. 
    ತಾಲೂಕು ಮಟ್ಟದ ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ೨೦ ಅಂಶಗಳು ಸೇರಿದಂತೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಇದಾಗಿದ್ದು, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಂಡು ಜ.೧ ರಿಂದ ಮಾ.೩೧ರವರೆಗಿನ ವರದಿ ಸಲ್ಲಿಸುವ ಮೂಲಕ ಸಭೆ ಯಶಸ್ವಿಗೊಳಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೋರಿದ್ದಾರೆ.