ಉಚಿತ ಸಾಮೂಹಿಕ ವಿವಾಹದಿಂದ ಕೌಟುಂಬಿಕ ವ್ಯವಸ್ಥೆ ಗಟ್ಟಿ, ಹಿಂದೂ ಧಾರ್ಮಿಕ ಪರಂಪರೆ ಉಳಿವು
ವಿಎಚ್‌ಪಿ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಬಿ.ಕೆ ಮೋಹನ್
ಭದ್ರಾವತಿ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿಯಿಂದ ಭಾನುವಾರ ಆಯೋಜಿಸಲಾಗಿದ್ದ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.
ಭದ್ರಾವತಿ : ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಮೂಲಕ ಹಿಂದೂ ಧರ್ಮದ ಧಾರ್ಮಿಕ ಪರಂಪರೆ ಭವಿಷ್ಯದ ಪೀಳಿಗೆಗೆ ತಿಳಿಸಿಕೊಡುವ ಜೊತೆಗೆ ಕೌಟುಂಬಿಕ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
ಅವರು ಭಾನುವಾರ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿಯಿಂದ ಆಯೋಜಿಸಲಾಗಿದ್ದ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.
ಸಾಮೀಜಿಗಳು, ಗಣ್ಯರು ಸೇರಿದಂತೆ ಬಂಧು-ಬಳಗದವರ ಸಮ್ಮುಖದಲ್ಲಿ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳ ಮೂಲಕ ವಿವಾಹವಾಗುವ ಭಾಗ್ಯ ಎಲ್ಲರಿಗೂ ಲಭಿಸುವುದಿಲ್ಲ. ಉಚಿತ ಸಾಮೂಹಿಕ ಮಹೋತ್ಸವ ನೂತನ ವಧು-ವರರಲ್ಲಿ ಹೆಚ್ಚಿನ ಜವಾಬ್ದಾರಿ ಮೂಡಿಸುತ್ತದೆ. ಭವಿಷ್ಯದಲ್ಲಿ ಇಬ್ಬರು ಪರಸ್ಪರ ನಂಬಿಕೆ, ಸಹಬಾಳ್ವೆಯಿಂದ ಬದುಕಲು ಸಹಕಾರಿಯಾಗುತ್ತದೆ ಎಂದರು.
ಉಚಿತ ಸಾಮೂಹಿಕ ವಿವಾಹ ಸಮಿತಿ ಗೌರವ ಸಲಹೆಗಾರ, ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಪ್ರಾಸ್ತಾವಿಕವಾಗಿ ಮಾತನಾಡಿ, ವಿವಾಹ ಎಂಬುದು ಕೇವಲ ಇಬ್ಬರ ನಡುವಿನ ದೈಹಿಕ ಸಂಬಂಧಕ್ಕಾಗಿ ಇರುವುದಲ್ಲ. ಧಾರ್ಮಿಕವಾಗಿ, ಸಾಮಾಜಿಕವಾಗಿ ಕೌಟುಂಬಿಕ ವ್ಯವಸ್ಥೆಯನ್ನು ರೂಪಿಸಿಕೊಳ್ಳುವುದಾಗಿದೆ. ಈ ಮೂಲಕ ಹಿಂದೂ ಪರಂಪರೆ ಉಳಿಸುವ, ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವುದಾಗಿದೆ. ಪರಿಷದ್ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆರಂಭಿಸಿದಾಗಿನಿಂದಲೂ ನಿರಂತರವಾಗಿ ಈ ನಿಟ್ಟಿನಲ್ಲಿಯೇ ಕಾರ್ಯಕ್ರಮವನ್ನು ರೂಪಿಸಿಕೊಂಡು ಬರುತ್ತಿದೆ ಎಂದರು.
ಭದ್ರಾವತಿ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿಯಿಂದ ಭಾನುವಾರ ಆಯೋಜಿಸಲಾಗಿದ್ದ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ . ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ೧೨೫ಕ್ಕೆ ೧೨೫ ಅಂಕಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ತಾಲೂಕಿನ ಕೂಡ್ಲಿ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಪಿ. ವೆಂಕಟರಮಣಶೇಟ್ ಅಧ್ಯಕ್ಷತೆವಹಿಸಿದ್ದರು.
ಪಿ. ಬಸವರಾಜು ಮತ್ತು ಲತಾ ಹಾಗು ಎಂ. ಶಿವಕುಮಾರ್ ಮತ್ತು ಪ್ರಿಯ ನೂತನ ವಧುವರರು ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ದಾಂಪತ್ಯಕ್ಕೆ ಕಾಲಿಟ್ಟರು. ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ೧೨೫ಕ್ಕೆ ೧೨೫ ಅಂಕಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ವಿಎಚ್‌ಪಿ ಕರ್ನಾಟಕ ದಕ್ಷಿಣ ಪ್ರಾಂತ ಸಾಮಾಜಿಕ ಸಮರಸ ಪ್ರಮುಖ್ ಬಿ.ಎಚ್ ರಮೇಶ್ ಬಾಬು, ಪ್ರಾಂತ ಧರ್ಮಪ್ರಸಾರ ಪ್ರಮುಖ್ ನಾರಾಯಣ ಜಿ. ವರ್ಣೀಕರ್, ಪ್ರಾಂತ ಕಾರ್ಯಕಾರಿಣಿ ಸದಸ್ಯ ಹಾ. ರಾಮಪ್ಪ, ವಿಭಾಗ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾಧ್ಯಕ್ಷ ವಾಸುದೇವರಾವ್, ಮಾತೃ ಮಂಡಳಿ ಅಧ್ಯಕ್ಷ ಯಶೋಧ ವೀರಭದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉಚಿತ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸುನಂದ ಗುರುಸಿದ್ದಪ್ಪ ಮತ್ತು ಸುನಂದ ಜಗದೀಶ್ ಪ್ರಾರ್ಥಿಸಿ, ಬಿ.ಎಚ್ ರೇಣುಕಯ್ಯ ಸ್ವಾಗತಿಸಿ, ಪಿ. ಮಂಜುನಾಥರಾವ್ ಪವಾರ್ ನಿರೂಪಿಸಿ, ಎನ್.ಎಸ್ ಮಹೇಶ್ವರಪ್ಪ ವಂದಿಸಿದರು.

.jpg)