ಸರ್ಕಾರಕ್ಕೆ ೩ ವರ್ಷ : ಶಾಸಕರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ 


ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ೩ ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ಭದ್ರಾವತಿ  ನಗರದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. 
    ಭದ್ರಾವತಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ೩ ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ನಗರದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. 
    ಪಕ್ಷದ ಹಿಂದುಳಿದ ವರ್ಗಗಳ(ಒಬಿಸಿ) ಜಿಲ್ಲಾ ಘಟಕದಿಂದ ಶಾಸಕರ ಗೃಹ ಕಛೇರಿಯಲ್ಲಿ ಲಾಡು ತಿನ್ನಿಸುವ ಮೂಲಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಲಭಿಸಲಿ. ಸರ್ಕಾರ ೫ ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸಂಭ್ರಮ ವ್ಯಕ್ತಪಡಿಸಲಾಯಿತು. 
    ಹಿಂದುಳಿದ ವರ್ಗಗಳ ಪ್ರಮುಖರಾದ ಬಿ. ಗಂಗಾಧರ್, ನರಸಿಂಹಮೂರ್ತಿ, ಮಹಮದ್ ರಫಿ, ಶಬ್ಬೀರ್ ಅಹಮದ್, ಧರ್ಮಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.