ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಭದ್ರಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವೀರಶೈವ ಲಿಂಗಾಯತ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಮಹಾಸಭೆ ವೆಬ್‌ಸೈಟ್ www. aivlm.org ನಲ್ಲಿ ಆನ್ ಲೈನ್ ಮೂಲಕ ಮೇ. 25ರೊಳಗೆ ಸಲ್ಲಿಸಬೇಕು. ಅಂಚೆ ಅಥವಾ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಿದಲ್ಲಿ ಸ್ವಿಕರಿಸುವುದಿಲ್ಲ. ಅರ್ಹರು ತಕ್ಷಣ ಅರ್ಜಿ ಸಲ್ಲಿಸುವ ಮೂಲಕ ಮಹಾಸಭಾ ಹಮ್ಮಿಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್ ವಿಜಯ ಕುಮಾರ್ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು, ಕೆ.ಎಸ್ ವಿಜಯ ಕುಮಾರ್, ಮೊ: 9845855233 ಅಥವಾ ಪ್ರಧಾನ ಕಾರ್ಯದರ್ಶಿ ನಟರಾಜ್ ಹೆಬ್ಬಂಡಿ, ಮೊ.7353380123 ಸಂಖ್ಯೆಗೆ ಸಂಪಕಿಶಬಹುದಾಗಿದೆ.
