ಮೇ.೧೦ರಂದು ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜಯಂತಿ
ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜಯಂತಿ ಮೇ.೧೦ರ ಭಾನುವಾರ ಬೆಳಿಗ್ಗೆ ೯.೩೦ಕ್ಕೆ ತಾಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಪರುಸಪ್ಪ ಕೆ. ಕುರುಬರ ಕೋರಿದ್ದಾರೆ.
