ಮೇ. ೧೩ರಂದು ಉಚಿತ ಶ್ರವಣ ತಪಾಸಣೆ
ಭದ್ರಾವತಿ: ಲಯನ್ಸ್ ಇಂಟರ್‌ನ್ಯಾಷನಲ್ ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ ಆಶ್ರಯದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗು ವಿತರಣೆ ಮೇ.೧೩ರ ಬುಧವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ನ್ಯೂಟೌನ್ ಲಯನ್ಸ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಇದೀಗ ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರ ಆಯೋಜಿಸಿದ್ದು, ಈ ಶಿಬಿರದಲ್ಲಿ ಶ್ರವಣ ಯಂತ್ರಕ್ಕೆ ತಗಲು ವೆಚ್ಚದ ಶೇ.೪೦ರಷ್ಟು ಮೊತ್ತ ಭರಿಸುತ್ತಿದ್ದಾರೆ. ಈ ಶಿಬಿರ ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ೮೯೫೧೮೦೪೩೯೯ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
