ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ವಿದ್ಯಾರ್ಥಿನಿಗೆ ಸನ್ಮಾಸ
ಪ್ರಗತಿಪರ ಕೃಷಿಕ ಶ್ರೀಧರ್ ರೂಢಿಸಿಕೊಂಡು ಬಂದಿರುವ ವಿಶಿಷ್ಟ ಕಾರ್ಯ
ಭದ್ರಾವತಿ ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಎಲ್ ರಮ್ಯಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಯನ್ನು ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್ ರವರು ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ: ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಎಲ್ ರಮ್ಯಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಯನ್ನು ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್ ರವರು ಸನ್ಮಾನಿಸಿ ಅಭಿನಂದಿಸಿದರು.
ರಮ್ಯಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 608 ಹಾಗು ಇದೆ ಶಾಲೆಯ ವಿದ್ಯಾರ್ಥಿನಿ ಡಿ. ಕೀರ್ತನ 605 ಅಂಕಗಳನ್ನು ಪಡೆದು ಅತ್ಯನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಗೆ ಹಾಗು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಪ್ರಗತಿಪರ ಕೃಷಿಕರಾದ ಶ್ರೀಧರ್ ರವರು ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯ ರೂಢಿಸಿಕೊಂಡು ಬಂದಿದ್ದಾರೆ.
ಶ್ರೀಧರ್ ರವರು ರಮ್ಯಾರವರ ಮನೆಗೆ ತೆರಳಿ ಆಕೆಯನ್ನು ಸನ್ಮಾನಿಸಿ ಅಭಿನಂದಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿದ್ದಾರೆ. ಶ್ರೀಧರ್ ರವರು ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ ಗಮನ ಸೆಳೆದಿದ್ದಾರೆ.
