ವಿದ್ಯಾರ್ಥಿ ನಿಲಯದಲ್ಲಿ ಉತ್ತಮ ಕರ್ತವ್ಯ : ಸ್ವಂತ ಹಣ, ದಾನಿಗಳ ನೆರವಿನಿಂದ ಅಭಿವೃದ್ಧಿ ಕಾರ್ಯ

ದೇವರಾಜ ಅರಸು ವಿದ್ಯಾರ್ಥಿ ನಿಲಯದ ನಿವೃತ್ತ ಮೇಲ್ವಿಚಾರಕ ಸಿ.ಎಂ ರಮೇಶ್‌ಗೆ ಸನ್ಮಾನ 


 ಕರ್ತವ್ಯದ ಸಂದರ್ಭದಲ್ಲಿ ಸ್ವಂತ ಕೆಜೆಡಿ ಹಣ ಹಾಗು ದಾನಿಗಳ ನೆರವಿನೊಂದಿಗೆ ವಿದ್ಯಾರ್ಥಿ ನಿಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದ ಭದ್ರಾವತಿ ಜಟ್‌ಪಟ್ ನಗರದ ದೇವರಾಜ ಅರಸು ವಿದ್ಯಾರ್ಥಿ ನಿಲಯದ ನಿವೃತ್ತ ಮೇಲ್ವಿಚಾರಕ ಸಿ.ಎಂ ರಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಭದ್ರಾವತಿ : ಕರ್ತವ್ಯದ ಸಂದರ್ಭದಲ್ಲಿ ಸ್ವಂತ ಕೆಜೆಡಿ ಹಣ ಹಾಗು ದಾನಿಗಳ ನೆರವಿನೊಂದಿಗೆ ವಿದ್ಯಾರ್ಥಿ ನಿಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದ ದೇವರಾಜ ಅರಸು ವಿದ್ಯಾರ್ಥಿ ನಿಲಯದ ನಿವೃತ್ತ ಮೇಲ್ವಿಚಾರಕ ಸಿ.ಎಂ ರಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದ ಹಿಂದುಳಿದ ವರ್ಗಗಳ ಇಲಾಖೆ ದೇವರಾಜ ಅರಸು ವಸತಿ ನಿಲಯದ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್‌ರವರು  ಇತ್ತೀಚೆಗೆ ನಿವೃತ್ತಿ ಹೊಂದಿದ್ದು, ಇವರ ಕರ್ತವ್ಯದಲ್ಲಿನ ಬದ್ದತೆ ಹಾಗು ಸ್ವಂತ ಹಣ ಹಾಗು ದಾನಿಗಳ ನೆರವಿನಿಂದ ಕೈಗೊಂಡಿರುವ ಕಾರ್ಯಗಳು ಇತರರಿಗೆ ಮಾದರಿಯಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸುವ ಮೂಲಕ ನಗರದ ನ್ಯೂಟೌನ್ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 
    ಶಿರಸಿ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಉಪತಹಸೀಲ್ದಾರ್ ಮಂಜಾನಾಯ್ಕ, ಪಶುಪಾಲನಾ ಇಲಾಖೆ ನಿವೃತ್ತ ಹಿರಿಯ ಪರಿವೀಕ್ಷಕ ಎನ್.ಎಸ್ ರಮೇಶ್ ಇತರರು ಉಪಸ್ಥಿತರಿದ್ದರು.