ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರ ಸಾವು


    ಭದ್ರಾವತಿ: ನಗರದ ತರೀಕೆರೆ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ನಾಗರಾಜ್(೪೮) ಎಂಬುವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.  
    ಶನಿವಾರ ಸಂಜೆ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರವಾಹನದಲ್ಲಿ ಹಿಂಬದಿ ಕುಳಿತಿದ್ದ ಇವರ ಸಹೋದರರ ಮಗಳಿಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. 
    ನಾಗರಾಜ್‌ರವರು ನೆಹರೂ ನಗರದಲ್ಲಿರುವ ಸಂಬಂಧಿಕರ ಮನೆಗೆ ಸಹೋದರನ ಮಗಳನ್ನು ಕೂರಿಸಿಕೊಂಡು ಹೋಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.