ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ 


ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಅಕಾಲಿಕ ಗಾಳಿ ಮಳೆಯಿಂದಾಗಿ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಭದ್ರಾವತಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಅಕಾಲಿಕ ಗಾಳಿ ಮಳೆಯಿಂದಾಗಿ ಕ್ಷೇತ್ರದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸಂಕಷ್ಟಕ್ಕೆ ಒಳಗಾದವರಿಗೆ ಧೈರ್ಯ ತುಂಬಿದರು. ಅಲ್ಲದೆ ಅಧಿಕಾರಿಗಳಿಗೆ ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ವರದಿ ನೀಡುವಂತೆ ಸೂಚಿಸಿದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹಾಗು ಸಂಬಂಧಪಟ್ಟ ಸಚಿವರುಗಳೊಂದಿಗೆ ಚರ್ಚಿಸಿ ಸಿ ಸರ್ಕಾರದ ನಿಯಮಾವಳಿ ಪ್ರಕಾರ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು. 
    ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ತಾಲೂಕು ಬಗರ್ ಉಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಅತ್ತಿಗುಂದ ಗ್ರಾಮದ ಧರ್ಮಕುಮಾರ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು.