ಜೂ.13ರಂದು ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

9 ದಿನಗಳ ಆಚರಣೆಗೆ ಕಾರವಾರ ಧರ್ಮಾಧ್ಯಕ್ಷರಾದ ಬಿಷಪ್ ಡ್ಯುಮಿಂಗ್ ಡಯಾಸ್ ಚಾಲನೆ



ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜೂ.13 ರಂದು ವಿಜೃಂಭಣೆಯಿಂದ ಜರುಗಲಿದ್ದು, ಈ ಹಿನ್ನಲೆಯಲ್ಲಿ 9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಆಚರಣೆಗಳಿಗೆ ಕಾರವಾರ ಧರ್ಮಾಧ್ಯಕ್ಷರಾದ ಬಿಷಪ್ ಡ್ಯುಮಿಂಗ್ ಡಯಾಸ್ ಚಾಲನೆ ನೀಡಿದರು.
    ಭದ್ರಾವತಿ : ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜೂ.13 ರಂದು ವಿಜೃಂಭಣೆಯಿಂದ ಜರುಗಲಿದ್ದು, ಈ ಹಿನ್ನಲೆಯಲ್ಲಿ 9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಆಚರಣೆಗಳಿಗೆ ಕಾರವಾರ ಧರ್ಮಾಧ್ಯಕ್ಷರಾದ ಬಿಷಪ್ ಡ್ಯುಮಿಂಗ್ ಡಯಾಸ್ ಚಾಲನೆ ನೀಡಿದರು
    ಪ್ರತಿ ವರ್ಷ ಗ್ರಾಮದ ಸರ್ವ ಧರ್ಮದವರು ಒಟ್ಟಾಗಿ ಈ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದು, ಗ್ರಾಮದೆಲ್ಲೆಡೆ ಹಬ್ಬದ ವಾತಾವರಣ ಕಂಡು ಬರುತ್ತಿದೆ. ಮಹೋತ್ಸವದ ಮೊದಲ 9 ದಿನಗಳ ಕಾಲ ಆಧ್ಯಾತ್ಮಿಕ ಭಕ್ತಿ ಕಾರ್ಯಗಳು ಪ್ರಾರಂಭಗೊಂಡಿದ್ದು, ಧರ್ಮಾಧ್ಯಕ್ಷರಾದ ಬಿಷಪ್ ಡ್ಯುಮಿಂಗ್ ಡಯಾಸ್ ರವರು ಸಂತ ಅಂತೋಣಿಯವರ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಚಾಲನೆ ನೀಡಿದರು.
    ಜೂನ್ 13ರ ಹಬ್ಬದ ಆಡಂಬರದ ಬಲಿ ಪೂಜೆಯನ್ನು ಶಿವಮೊಗ್ಗ ಸೆಕ್ರೆಟ್ ಆರ್ಟ್ ಪ್ರಧಾನಾಲಯದ ಧರ್ಮಗುರುಗಳಾದ ಫಾದರ್ ಸ್ಟ್ಯಾನಿ ಡಿಸೋಜರವರಿಂದ ನೆರವೇರಲಿದೆ. ಜೂ.12ರಂದು ಸಂಜೆ 5 ಗಂಟೆಗೆ ಸಂತ ಅಂತೋಣಿಯವರ ಭವ್ಯ ತೇರಿನ ಮೆರವಣಿಗೆ ನೆರವೇರಲಿದೆ. ಶಿವಮೊಗ್ಗ ಮಲ್ಟಿಪರ್ಪಸ್ ಸೊಸೈಟಿ ನಿರ್ದೇಶಕರಾದ ಫಾದರ್ ಪಿಯೂಸ್ ಡಿಸೋಜ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ಧರ್ಮ ಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಅಲ್ಮೇಡ ತಿಳಿಸಿದರು .
ಜೂ.೧೩ರ ಶುಕ್ರವಾರ ಸಂತ ಅಂತೋಣಿಯವರು ಮೃತಪಟ್ಟ ದಿನವಾಗಿದ್ದು, ಅವರ ಸ್ಮರಣೆಗಾಗಿ ವಾರ್ಷಿಕ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಅಂದು ಭಕ್ತಿಭಾವದ ವಿಶೇಷ ಪೂಜಾ ವಿಧಿ-ವಿಧಾನಗಳು, ಪ್ರಾರ್ಥನೆಗಳು, ಪ್ರಭೋದನೆಗಳು, ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ.
    ಮಹೋತ್ಸವಕ್ಕೆ ತಾಲೂಕಿನ ಹಳೇನಗರ, ನ್ಯೂಟೌನ್, ಮಾವಿನಕೆರೆ, ಕಾಗದನಗರ, ಹಿರಿಯೂರು ಧರ್ಮಕೇಂದ್ರಗಳ ಹಾಗು ಜಿಲ್ಲೆಯ ಶಿವಮೊಗ್ಗ ಸಾಗರ, ಶಿಕಾರಿಪುರ, ಸೊರಬ ಸೇರಿದಂತೆ ತಾಲೂಕು ಹಾಗು ಜಿಲ್ಲಾ ಧರ್ಮಕೇಂದ್ರಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಪ್ರತಿವರ್ಷದ ಜಾತ್ರಾಮಹೋತ್ಸವಕ್ಕೆ ಎಲ್ಲೆಡೆಯಿಂದ ಸಾವಿರಾರು ಭಕ್ತಾದಿಗಳು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡುವುದರಿಂದ ಅವರಿಗೆ ಬೇಕಾದ ಸಲಹೆ, ಸೂಚನೆ, ಮಾರ್ಗದರ್ಶನ ನೀಡಲು ಅಕ್ಕ-ಪಕ್ಕದ ಧರ್ಮ ಕೇಂದ್ರದ ಗುರುಗಳ, ಧರ್ಮ ಭಗಿನಿಯರ ಸಹಾಯ ಪಡೆಯಲಾಗಿದೆ. ಸ್ಥಳೀಯ ಧರ್ ಕೇಂದ್ರದ ಭಕ್ತಾದಿಗಳನ್ನು ಪ್ರತ್ಯೇಕ ಗುಂಪುಗಳನ್ನಾಗಿ ವಿಂಗಡಿಸಿ, ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದು ಧರ್ಮ ಕೇಂದ್ರದ ಧರ್ಮಭಗಿನಿ ಸಿಸ್ಟರ್ ಲಾಲಮ್ಮ ತಿಳಿಸಿದ್ದಾರೆ.
    ವಾರ್ಷಿಕ ಮಹೋತ್ಸವಕ್ಕೆ ದೂರದ ಊರುಗಳಿಂದ ಆಗಮಿಸಲಿರುವ ಭಕ್ತರಿಗಾಗಿ ಚರ್ಚ್ ವತಿಯಿಂದ ವಸತಿ ಸೌಲಭ್ಯ, ಊಟದ ವ್ಯವಸ್ಥೆ ಹಾಗು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
ಮಾವಿನಕೆರೆ ಧರ್ಮಕೇಂದ್ರದ ಫಾದರ್ ಪೌಲ್ ಕ್ರಾಸ್ತ , ಡಾನ್ ಬೋಸ್ಕೊ ಸಂಸ್ಥೆ ನಿರ್ದೇಶಕ ಫಾದರ್ ಕ್ರಿಸ್ತ ರಾಜ್ , ಸೈಂಟ್ ಡೋಮಿನಿಕ್, ಸಂಸ್ಥೆಯ ಧರ್ಮ ಭಗಿನೀಯರು, ಭಕ್ತಾಧಿಗಳು ಉಪಸ್ಥಿತರಿದ್ದರು.