ಜೇಡಿಕಟ್ಟೆಯಲ್ಲಿ  ಸಭಾಭವನ, ಮಳಿಗೆ ಉದ್ಘಾಟನೆ 



ಭದ್ರಾವತಿ ನಗರದ ಜೇಡಿಕಟ್ಟೆ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಟ್ರಸ್ಟ್ ಆಶ್ರಯದಲ್ಲಿ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ರವರ ಅನುದಾನದಲ್ಲಿ ನಿರ್ಮಿಸಲಾಗಿರುವ ಸಭಾಭವನ ಹಾಗೂ ಮಳಿಗೆಯನ್ನು ಭಾನುವಾರ ನಗರಸಭೆ ಹಿರಿಯ ಸದಸ್ಯ ಬಿ .ಕೆ ಮೋಹನ್ ಉದ್ಘಾಟಿಸಿದರು.‌
ಭದ್ರಾವತಿ: ನಗರದ ಜೇಡಿಕಟ್ಟೆ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಟ್ರಸ್ಟ್ ಆಶ್ರಯದಲ್ಲಿ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ರವರ ಅನುದಾನದಲ್ಲಿ ನಿರ್ಮಿಸಲಾಗಿರುವ ಸಭಾಭವನ ಹಾಗೂ ಮಳಿಗೆಯನ್ನು ಭಾನುವಾರ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.
     ಜೇಡಿಕಟ್ಟೆ  ಗ್ರಾಮದ  ಬಿ.ಎಚ್ ರಸ್ತೆ ಪಕ್ಕದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನ ಕೆಲವು ವರ್ಷಗಳ ಹಿಂದೆ ಜೀರ್ಣೋದ್ಧಾರಗೊಂಡಿದ್ದು, ಜನಪ್ರತಿನಿಧಿಗಳು, ದಾನಿಗಳು ಹಾಗೂ ಭಕ್ತರ ಸಹಕಾರದಿಂದ ಹಂತ ಹಂತವಾಗಿ ಅಭಿವೃದ್ಧಿಗೊಳ್ಳುತ್ತಿದೆ.
       ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. 
     ಸರ್ಕಾರದ 5 ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ  ಬಿ‌. ಎಸ್ ಗಣೇಶ್ ಹಾಗೂ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಎಸ್.ವಾಗೀಶ್ ಹಾಗೂ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಪಿ. ಪ್ರಕಾಶ್,  ಮೇಘನಾಥ, ಎನ್. ಧನರಾಜ್, ಹೋಟೆಲ್ ಶಿವಣ್ಣ, ಶಿವಕುಮಾರ್, ದೇವಲಿಂಗೇಗೌಡರು, ಶಾರದಾ ಬಾಯಿ, ರತ್ನಮ್ಮ, ಪಾರ್ವತಮ್ಮ, ನಾಗಮ್ಮ,  ಕುಪ್ಪಸ್ವಾಮಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.