ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ೧೪೨ನೇ ಜನ್ಮದಿನ ಆಚರಣೆ 


ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ನಗರದ ಮೈಸೂರು ಕಾಗದ ಕಾರ್ಖಾನೆ ಸಂಸ್ಥಾಪಕರು, ಕ್ಷೇತ್ರದ ಅನ್ನದಾತ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ೧೪೨ನೇ ಜನ್ಮದಿನ ತಾಲೂಕು ಕಛೇರಿಯಲ್ಲಿ ಗುರುವಾರ ಆಚರಿಸಲಾಯಿತು. 
    ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಸಂಸ್ಥಾಪಕರು, ಕ್ಷೇತ್ರದ ಅನ್ನದಾತ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ೧೪೨ನೇ ಜನ್ಮದಿನ ತಾಲೂಕು ಕಛೇರಿಯಲ್ಲಿ ಗುರುವಾರ ಆಚರಿಸಲಾಯಿತು. 
    ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಕೊಡುಗೆಗಳನ್ನು ಸ್ಮರಿಸಲಾಯಿತು. ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್. ವೆಂಕಟೇಶ್, ಪ್ರದಾನ ಕಾರ್ಯದರ್ಶಿ ಬಿ. ಜಗದೀಶ್, ಸದಸ್ಯರಾದ ಪ್ರಶಾಂತ್, ಶರತ್, ತಾಲೂಕು ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.