ವಿಐಎಸ್‌ಎಲ್ ಕಾರ್ಖಾನೆ :  ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ


ಕೇಂದ್ರ ಉಕ್ಕು ಪ್ರಾಧಿಕಾರ(ಸೈಲ್)ದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಆಡಳಿತ ಮಂಡಳಿ ಪ್ರತಿ ವರ್ಷದಂತೆ ಈ ಬಾರಿ ಸಹ ಕಾರ್ಖಾನೆಯ ಅಧಿಕಾರಿಗಳು ಹಾಗು ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಿ ಅಭಿನಂದಿಸಿತು. 
ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರ(ಸೈಲ್)ದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಆಡಳಿತ ಮಂಡಳಿ ಪ್ರತಿ ವರ್ಷದಂತೆ ಈ ಬಾರಿ ಸಹ ಕಾರ್ಖಾನೆಯ ಅಧಿಕಾರಿಗಳು ಹಾಗು ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಿ ಅಭಿನಂದಿಸಿತು. 
    ಕಾರ್ಖಾನೆಯ ಭದ್ರಾ ಅತಿಥಿಗೃಹದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಉದ್ಘಾಟಿಸಿದರು. 
    ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. ೯೦ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ  ಒಟ್ಟು ೧೦ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅಭಿನಂದಿಸಿ, ಪ್ರಶಂಸಾ ಪತ್ರಗಳು ಹಾಗೂ ನಗದು ಪುರಸ್ಕಾರ ವಿತರಿಸಲಾಯಿತು. 
    ಆಡಳಿತ ಮಂಡಳಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸುವ ಜೊತೆಗೆ ಅವರ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಪರ ಜೀವನ ಯಶಸ್ವಿಯಾಗಲಿ ಎಂದು ಹಾರೈಸಿದೆ. 
    ಮುಖ್ಯ ಮಹಾಪ್ರಬಂಧಕ(ಮಾನವ ಸಂಪನ್ಮೂಲ) ಬಿ. ವಿಶ್ವನಾಥ್, ಕಾರ್ಮಿಕರ ಸಂಘದ ಅಧ್ಯಕ್ಷ ಅಮೃತ್ ಕುಮಾರ್ ಹಾಗು ಪದಾಧಿಕಾರಿಗಳು, ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಖಾನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 
     ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಪ್ರತಿಭಾವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅಭಿನಂದಿಸಿದ  ಸೈಲ್-ವಿಐಎಸ್‌ಎಲ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
     ಸಹಾಯಕ ಮಹಾಪ್ರಬಂಧಕರು (ನಗರಾಡಳಿತ ಮತ್ತು ಸಾರ್ವಜನಿಕ ಸಂಪರ್ಕ) ನವೀನ್ ರಾಹುಲ್ ಕಾರ್ಯಕ್ರಮ ನಿರೂಪಿಸಿದರು.