ಕೆಪಿಸಿಸಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ರನ್ನು ಸ್ವಾಗತಿಸಿದ ಶಿವಮೊಗ್ಗ ಕಾಂಗ್ರೆಸ್ ಮುಖಂಡರು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಸ್ವಾಗತಿಸಿದರು.
ಭದ್ರಾವತಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ, ಕರ್ನಾಟಕ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್.ಎಂ ಮಂಜುನಾಥಗೌಡ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ ಮೊದಲಾದವರು ಇದ್ದರು.
