ಭದ್ರಾವತಿ ವಿವಿಧೆಡೆ ಶಾಲಾ-ಕಾಲೇಜುಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ 



ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನಕ ವಿದ್ಯಾಸಂಸ್ಥೆಯಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನ ಆವರಣದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಲಾಯಿತು. 
- ವಿಇಎಸ್, ಅನನ್ಯ, ಕನಕ ವಿದ್ಯಾಸಂಸ್ಥೆ ಸೇರಿದಂತೆ ಶಾಲಾ-ಕಾಲೇಜುಗಳಲ್ಲಿ ಆಚರಣೆ.
- ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳಿಗೆ ರಜೆ ಇದ್ದರೂ ಸಹ ಎಂದಿನಂತೆ ಯೋಗ ದಿನಾಚರಣೆಯಲ್ಲಿ ಹಾಜರು. 
- ಯೋಗ ಕೇಂದ್ರಗಳ ಶಿಕ್ಷಕರಿಂದ ಯೋಗ ಕುರಿತು ಅರಿವು. 
    ಭದ್ರಾವತಿ: ನಗರದ ವಿವಿಧೆಡೆ ಶಾಲಾ-ಕಾಲೇಜು, ಸರ್ಕಾರಿ ಕಛೇರಿ, ಸಂಘ-ಸಂಸ್ಥೆಗಳಿಂದ ಭಾನುವಾರ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. 
    ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳಿಗೆ ರಜೆ ಇದ್ದರೂ ಸಹ ಎಂದಿನಂತೆ ಬೆಳಿಗ್ಗೆ ಹಾಜರಾಗಿ ವಿವಿಧ ಆಸನಗಳ ಪ್ರದರ್ಶನದ ಮೂಲಕ ಯೋಗ ದಿನ ಆಚರಿಸಲಾಯಿತು. ವಿವಿಧೆಡೆ ಯೋಗ ಕೇಂದ್ರಗಳ ಶಿಕ್ಷಕರು ಹಾಜರಾಗಿ ಯೋಗ ಕಲಿಕೆ ಮಹತ್ವ, ಪರಂಪರೆ ಹಾಗು ವಿವಿಧ ಆಸನಗಳ ಕುರಿತು ಮಾಹಿತಿ ನೀಡಿದರು. 
    ಶ್ರೀ ಕನಕ ವಿದ್ಯಾಸಂಸ್ಥೆ : 
    ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನಕ ವಿದ್ಯಾಸಂಸ್ಥೆಯಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನ ಆವರಣದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಲಾಯಿತು. 
    ಪ್ರೌಢ ಶಾಲಾ ವಿಭಾಗದ  ಮುಖ್ಯೋಪಾಧ್ಯಾಯ ಸಿ.ಡಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಯೋಗ ಕಲಿಕೆ ಮಹತ್ವ ವಿವರಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಜಿ.ಕೆ ಹರೀಶ್ ಮತ್ತು ಶಾಲೆಯ ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು. 
    ವಿಶ್ವೇಶ್ವರಾಯ ವಿದ್ಯಾಸಂಸ್ಥೆ : 
    ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ೧೨ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನ ವಿಶೇಷವಾಗಿ ಆಚರಿಸಲಾಯಿತು. 
    ಈ ಬಾರಿಯ ಯೋಗ ದಿನಾಚರಣೆ ಧ್ಯೇಯ ವಾಕ್ಯ `ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ' ಘೋಷಣೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ,  ಬಾಲಕಿಯರ ಸರ್ಕಾರಿ ಸಂಚಿಯ ಹೊನ್ನಮ್ಮ ಪ್ರೌಢಶಾಲೆ ಉಪ ಪ್ರಾಂಶುಪಾಲ ಮನೋಹರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ೧೨ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನ ವಿಶೇಷವಾಗಿ ಆಚರಿಸಲಾಯಿತು. 
     ವಿದ್ಯಾ ಸಂಸ್ಥೆ  ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿವಲಿಂಗೇಗೌಡ ನೇತೃತ್ವದಲ್ಲಿ ಎಲ್ಲ ವಿಭಾಗದ ಮುಖ್ಯ     ಶಿಕ್ಷಕರು. ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಹ ಶಿಕ್ಷಕರ ಸಹಯೋಗದೊಂದಿಗೆ ಪ್ರಾಥಮಿಕ ಪ್ರೌಢ ಶಾಲಾ ವಿದ್ಯಾರ್ಥಿಗಳು ಮತ್ತು ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಭಾಗವಹಿಸಿದ್ದರು. 
    ದೈಹಿಕ ಶಿಕ್ಷಣ ಶಿಕ್ಷಕಿ ಪಿ. ರೇವತಿ ನಿರೂಪಿಸಿ, ಎಂ.ಎಸ್ ಮಂಜುನಾಥ್ ಸ್ವಾಗತಿಸಿದರು. ಟಿ.ಎಸ್ ವತ್ಸಲ ದೇವಿ ಪ್ರಾರ್ಥಿಸಿ, ದೈಹಿಕ ಶಿಕ್ಷಣ ಶಿಕ್ಷಕರು ಆರ್. ರವಿ ವಂದಿಸಿದರು. 
    ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ : 
     ನಗರದ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು. ಅನನ್ಯ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ. ನಾಗರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನವನಿಗೆ ಎಲ್ಲದಕ್ಕಿಂತ ಆರೋಗ್ಯ ಮುಖ್ಯ, ಆರೋಗ್ಯವೇ ಭಾಗ್ಯ. ಯೋಗದಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು. 
     ವಿದ್ಯಾಸಂಸ್ಥೆ ಮುಖ್ಯೋಪಾಧ್ಯಾಯ ಕೆ. ಕಲ್ಲೇಶ್ ಕುಮಾರ್, ಯೋಗ ದಿನದ ಇತಿಹಾಸ, ಯೋಗ ದಿನದ ವಿಶೇಷತೆ. ಯೋಗ ಒಂದು ಬದುಕಿನ ಕಲೆ ಎಂದು ಯೋಗದ ಪ್ರಾಮುಖ್ಯತೆ ವಿವರಿಸಿದರು. ಶ್ರೀ ಕುಮಾರ್ ಆರ್ ಹಾಗೂ ಶ್ರೀಮತಿ ನಿಶ್ಚಿತ ಕೆ ದೈಹಿಕ ಶಿಕ್ಷಕರು ಹಾಗೂ ಅನನ್ಯ ಯೋಗಾ ಕೇಂದ್ರದ ಸದಸ್ಯರು ಇವರ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಯೋಗಾಸನವನ್ನು ಪ್ರದರ್ಶಿಸಿದರು. 
    ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್, ಆಡಳಿತಾಧಿಕಾರಿ ಎಸ್. ವೇಣುಗೋಪಾಲ್, ಮುಖ್ಯೋಪಾಧ್ಯಾಯಿನಿಯರಾದ ಆರ್. ಸುನಿತಾ ಹಾಗೂ ಎ. ತನುಜ, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಭಾಗವಹಿಸಿದ್ದರು. ಶಾರದ ಪ್ರಾರ್ಥಿಸಿ, ಎನ್. ಸೃಷ್ಟಿ ನಿರೂಪಿಸಿದರು.  ಲಿಪಿ ಮಿಲನ ಸ್ವಾಗತಿಸಿ, ವೈ. ಪ್ರಾರ್ಥನ ವಂದಿಸಿದರು.


ಭದ್ರಾವತಿ ನಗರದ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆ ಅಧ್ಯಕ್ಷ ಡಾ. ಕೆ. ನಾಗರಾಜ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.