ಜೂ.೧೧ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ : ಲಕ್ಕವಳ್ಳಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.೧೧ರ ಗುರುವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬಿಆರ್‌ಪಿ, ಕುವೆಂಪು ವಿಶ್ವವಿದ್ಯಾಲಯ, ಸಿಂಗನಮನೆ, ಶಾಂತಿನಗರ, ಶಂಕರಘಟ್ಟ, ನಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ತಮ್ಮಡಿಹಳ್ಳಿ, ಮಲ್ಲಿಗೇನಹಳ್ಳಿ ಕ್ಯಾಂಪ್, ವದಿಯೂರು, ಗ್ಯಾರೇಜ್ ಕ್ಯಾಂಪ್, ಹುಣಸೇಕಟ್ಟೆ ಜಂಕ್ಷನ್, ಹುಣಸೇಕಟ್ಟೆ, ರಂಗನಾಥಪುರ ಮತ್ತು ಗೌಳಿಗೆರೆ ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
