ಬೃಹತ್ ರಕ್ತದಾನ ಶಿಬಿರ ಪೂರ್ವಭಾವಿ ಸಭೆ 


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಭದ್ರಾವತಿ ತಾಲೂಕು ಘಟಕದಿಂದ ಈ ಬಾರಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಸರ್ಕಾರದ ವಿವಿಧ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿ ಸಭೆ ಮಂಗಳವಾರ ಸಂಜೆ ಹಳೇನಗರದ ಪತ್ರಿಕಾ ಭವನದಲ್ಲಿ ನಡೆಯಿತು.  
    ಭದ್ರಾವತಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಈ ಬಾರಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಸರ್ಕಾರದ ವಿವಿಧ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿ ಸಭೆ ಮಂಗಳವಾರ ಸಂಜೆ ಹಳೇನಗರದ ಪತ್ರಿಕಾ ಭವನದಲ್ಲಿ ನಡೆಯಿತು. 
    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಸಭೆಯ ನೇತೃತ್ವ ವಹಿಸಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಬೃಹತ್ ರಕ್ತದಾನ ಶಿಬಿರ ಆಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದರು. ಅಲ್ಲದೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.