ಆರೋಗ್ಯ ಇಲಾಖೆ ಟಾಸ್ಕ್ ಪೋರ್ಸ್ ಕಮಿಟಿ ಸಭೆ
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಭದ್ರಾವತಿ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸೋಮವಾರ ಟಾಸ್ಕ್ ಫೋರ್ಸ್ ಕಮಿಟಿ ಸಭೆ ನಡೆಯಿತು.
ಭದ್ರಾವತಿ: ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸೋಮವಾರ ಟಾಸ್ಕ್ ಫೋರ್ಸ್ ಕಮಿಟಿ ಸಭೆ ನಡೆಯಿತು.
ತಹಸೀಲ್ದಾರ್ ಪ್ರದೀಪ್ ದೇವಗಿರಿ ಅಧ್ಯಕ್ಷತೆವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಜೂ.೨೮ರಿಂದ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಮಾಹಿತಿ ನೀಡಿ ಯಶಸ್ವಿಗೊಳಿಸಲು ಸಹಕಾರ ನೀಡುವಂತೆ ಕೋರಿದರು. ಅಲ್ಲದೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಕುರಿತು ಇಲಾಖೆಯಿಂದ ನಡೆಸುತ್ತಿರುವ ಎಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಗೃಹ ಆರೋಗ್ಯ ಯೋಜನೆ, ನಾಯಿ ಕಡಿತ, ಹಾವು ಕಡಿತ, ಎಚ್‌ಪಿವಿ ಲಸಿಕೆ, ಶಾಲಾ ಆರೋಗ್ಯ ಕಾರ್ಯಕ್ರಮ ಮತ್ತು ತಪಾಸಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದರು.
ಸಭೆಯಲ್ಲಿ ನಗರಸಭೆ, ತಾಲೂಕು ಪಂಚಾಯಿತಿ, ಐಸಿಡಿಎಸ್, ಬಿಇಓ, ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
