ಉಚಿತ ಕಣ್ಣಿನ ತಪಾಸಣೆ ಶಿಬಿರ ಯಶಸ್ವಿ
ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ನೇತೃತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಭದ್ರಾವತಿ ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ಸಮುದಾಯ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ: ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ನೇತೃತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಆಶೀರ್ವಾದ ಆಸ್ಪತ್ರೆ ಸರ್ಜನ್ ಅರುಣ್ ಮಾತನಾಡಿ, ಕಣ್ಣಿನ ಸುರಕ್ಷತೆ ಹಾಗು ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸ್ವ ಸಹಾಯ ಸಂಘದ ಸದಸ್ಯರು ಹಾಗು ಸಮುದಾಯದ ೮೨ ಸದಸ್ಯರು ಉಚಿತ ಕಣ್ಣಿನ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಂಡರು. ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿಯಿಂದ ಹಲವಾರು ಸೇವಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರಿಂದ ಹೆಚ್ಚಿನ ಸಹಕಾರ ಲಭಿಸುತ್ತಿದ್ದು, ಅಲ್ಲದೆ ಸೇವಾ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.
