ಅಂಗನವಾಡಿ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಜೂ.೨೦ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ೨೩ರಂದು ಮೂಲ ದಾಖಲಾತಿ ಹಾಜರುಪಡಿಸಿ
ಭದ್ರಾವತಿ: ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತಂತೆ ಆಕ್ಷೇಪಣೆಗಳಿದ್ದಲ್ಲಿ ಜೂ.೨೦ರೊಳಗೆ ಸಲ್ಲಿಸುವಂತೆ ಕೋರಲಾಗಿದೆ.
ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಹಾಗು ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ.
ಜೂ.೨೩ರಂದು ಬೆಳಿಗ್ಗೆ ೧೦ ಗಂಟೆಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲನೆಗಾಗಿ ಹಾಜರು ಪಡಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
