ಒಕ್ಕಲಿಗರ ಸಂಘದಿಂದ ಜೂ.೨೭ರಂದು ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ
ಭದ್ರಾವತಿ : ತಾಲೂಕು ಒಕ್ಕಲಿಗರ ಸಂಘದಿಂದ ಜೂ.೨೭ರ ಶನಿವಾರ ಸಂಜೆ ೫ ಗಂಟೆಗೆ ಅಪ್ಪರ್ ಹುತ್ತಾ ಕೆಂಪೇಗೌಡ ಸಮುದಾಯ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಆಯೋಜಿಸಲಾಗಿದೆ.
ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯನಂದನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್. ಆನಂದ್ ಅಧ್ಯಕ್ಷತೆವಹಿಸಲಿದ್ದು, ಸಂಘದ ಮಹಾಪೋಷಕರಾದ ಶಾರದ ಅಪ್ಪಾಜಿ ಉದ್ಘಾಟಿಸಲಿದ್ದಾರೆ.
ಎಸ್‌ಎವಿ ಪ್ರಾಥಮಿಕ ಶಾಲೆ ಶಿಕ್ಷಕ ಪ್ರಶಾಂತ್ ನೇತೃತ್ವದ ತಂಡದಿಂದ ನಾಡಪ್ರಭು ಕೆಂಪೇಗೌಡರ ಜೀವನ ಕುರಿತು ಕಿರುನಾಟಕ ನಡೆಯಲಿದ್ದು, ಕೆಂಪೇಗೌಡರ ಜೀವನ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಎಸ್‌ಎವಿ ಕಾಲೇಜು ಶಮನ್ವಿತ ಗೌಡ ವಿಷಯ ಮಂಡಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ್ರು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಧರ್ಮೇಶ್ ಸಿರಿಬೈಲು ಮತ್ತು ತಾಲೂಕು ಒಕ್ಕಲಿಗರ ಸಂಘದ ಮಹಾಪೋಷಕ ಎಲ್.ಜಿ ನಾಗರಾಜ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್ ನಾಗಭೂಷಣ್ ಕೋರಿದ್ದಾರೆ.
