ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ

ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ, ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ, ಸುಪ್ರಿಯಾ 


ಭಾರತೀಯ ಜನತಾ ಪಕ್ಷದ ನಗರ ಮಂಡಲ ಮಹಿಳಾ ಮೋರ್ಚಾದ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ ಹಾಗು ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ ಮತ್ತು ಸುಪ್ರಿಯಾ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಮಂಗಳವಾರ ನಗರದ ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
    ಭದ್ರಾವತಿ: ಭಾರತೀಯ ಜನತಾ ಪಕ್ಷದ ನಗರ ಮಂಡಲ ಮಹಿಳಾ ಮೋರ್ಚಾದ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ ಹಾಗು ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ ಮತ್ತು ಸುಪ್ರಿಯಾ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಮಂಗಳವಾರ ನಗರದ ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
    ಪಕ್ಷದ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಧುರ ಶಿವಾನಂದ್ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ ಹಾಗು ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ ಮತ್ತು ಸುಪ್ರಿಯಾ ಮಂಜುನಾಥ್, ಉಪಾಧ್ಯಕ್ಷರಾಗಿ ರೇಖಾ ಪದ್ಮಾವತಿ, ಆರತಿ ಸಿಂಗ್, ಶೈಲಾ ರಮೇಶ್, ಹೇಮಾವತಿ ಹಾಗೂ  ಕಾರ್ಯದರ್ಶಿಗಳಾಗಿ ಮಂಜುಳಮ್ಮ, ವಿದ್ಯಾ, ಪೂರ್ಣಿಮಾ, ನಿಶಾರಾವ್ ಹಾಗೂ ಶಕುಂತಲಾ ಮತ್ತು ಖಜಾಂಚಿಯಾಗಿ ಲತಾ ನಾಗೇಶ್  ಪದಗ್ರಹಣ ಸ್ವೀಕರಿಸಿದರು.  
    ವಿಶೇಷ ಆಹ್ವಾನಿತರಾಗಿ ಜಯಲಕ್ಷ್ಮಿ ಹೊಸಮನೆ, ಗಾಯತ್ರಿದೇವಿ ಹಾಗೂ ರತ್ನಮ್ಮ  ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲೀಲಾವತಿ, ಶಶಿಕಲಾ, ಸುಧಾ, ಮೀನಾಕ್ಷಿ, ರೂಪಾ ಹಾಗೂ ನಿರುಪಮಾ ರುದ್ರೇಶ್ ಅಧಿಕಾರ ಸ್ವೀಕಸಿದರು.
    ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರಸ್ವತಿ ವಿಜಯ್ ಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಮಲತಾ ಭೂಪಾಳಂ, ಜಿಲ್ಲಾ ಪ್ರಭಾರಿಗಳಾದ ಪುಷ್ಪಲತಾ ಹಾಗೂ ವಿನುತಾ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್ ಮತ್ತು ರಘುರಾವ್, ಉಪಾಧ್ಯಕ್ಷೆ ಸುಲೋಚನಾ ಪ್ರಕಾಶ್, ಕಾರ್ಯದರ್ಶಿ ಕವಿತಾ ರಾವ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅನ್ನಪೂರ್ಣ ಬಿ. ಛಲವಾದಿ, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
    ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಮುಖಂಡರು, ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.