ಹಾವು ಕಡಿತಕ್ಕೆ ರೈತ ಮಹಿಳೆ ಭಾಗ್ಯಮ್ಮ ಸಾವು 


ಭಾಗ್ಯಮ್ಮ 
ಭದ್ರಾವತಿ : ನಗರಸಭೆ ವ್ಯಾಪ್ತಿಯ ಗೌರಾಪುರ ಗ್ರಾಮದ ನಿವಾಸಿ ಭಾಗ್ಯಮ್ಮ(೬೧) ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿತ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ. 
    ಕಳೆದ ೪ ದಿನಗಳ ಹಿಂದೆ ಹಾವು ಕಡಿತಕ್ಕೆ ಒಳಗಾಗಿದ್ದ ಭಾಗ್ಯಮ್ಮ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಬಸವಗುಡಿ ಹಿಂದೂ ರುದ್ರಭೂಮಿಯಲ್ಲಿ ಸಂಜೆ ನೆರವೇರಿತು. ಇವರ ನಿಧನಕ್ಕೆ ಗ್ರಾಮದ ಮುಖಂಡರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.