ಸ್ವಾತಂತ್ರ್ಯ ಬಂದು ೭೯ ವರ್ಷಗಳು ಕಳೆದರೂ ಸಹ ಬಾಲಕಾರ್ಮಿಕ ಪದ್ಧತಿ ಜೀವಂತ

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ನ್ಯಾಯಾಧೀಶೆ ಚೇತನಾ ವಿಷಾದ


ಭದ್ರಾವತಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ಯೋಜಿಸಲಾಗಿತ್ತು.
    ಭದ್ರಾವತಿ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ೭೯ ವರ್ಷಗಳು ಕಳೆದರೂ ಸಹ ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳು ಇನ್ನೂ ಜೀವಂತವಾಗಿವೆ ಎಂದು ೨ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಚೇತನಾ ವಿಷಾದ ವ್ಯಕ್ತಪಡಿಸಿದರು. 
    ಅವರು ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ನಾವೆಲ್ಲರೂ ಶ್ರಮಿಸಬೇಕು ಎಂದರು.
    ನೂತನ ತಹಸೀಲ್ದಾರ್ ಪ್ರದೀಪ್ ದೇವಗಿರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ನಿರೀಕ್ಷಕಿ, ೧ ನೇ ವೃತ್ತ ಸುಪ್ರಿತ ಕಾರ್ಯಕ್ರಮ ನಿರೂಪಿಸಿದರು. ಕಾರ್ಮಿಕ ನಿರೀಕ್ಷಕ, ೨ ನೇ ವೃತ್ತ ರಕ್ಷಿತ್ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಮಾತನಾಡಿದರು.
    ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೇಶವಮೂರ್ತಿ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಬಾಲಕಾರ್ಮಿಕ ನಿಷೇಧಕ್ಕೆ ಸಂಬಂಧಿಸಿದಂತೆ ತಾಲೂಕು ಕಾರ್ಯಪಡೆಯಲ್ಲಿರುವ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳು ಹಾಗೂ ಗ್ಯಾರೇಜ್ ಮಾಲೀಕರು, ವೆಲ್ಡಿಂಗ್ ಶಾಪ್ ಮಾಲೀಕರು, ಆಲೆಮನೆಗಳ ಮಾಲೀಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.