ಶ್ರೀ ಅಕ್ಕಮಹಾದೇವಿ ಬಳಗದ ಅಧ್ಯಕ್ಷೆ ಸುವರ್ಣಮ್ಮ ಹಿರೇಮಠ್


ಸುವರ್ಣಮ್ಮ ಹಿರೇಮಠ್ 
    ಭದ್ರಾವತಿ: ಹಳೇನಗರದ ಶ್ರೀ ಅಕ್ಕಮಹಾದೇವಿ ಬಳಗದ ಅಧ್ಯಕ್ಷೆ ಸುವರ್ಣಮ್ಮ ಹಿರೇಮಠ್(೮೦) ಸೋಮವಾರ ಬೆಳಗಿನ ಜಾವ ಎನ್‌ಎಸ್‌ಟಿ ರಸ್ತೆಯ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. 
    ಸುವರ್ಣಮ್ಮ ಹಿರೇಮಠ್‌ರವರ ಅಪೇಕ್ಷೆಯಂತೆ ಅವರ ಮೃತದೇಹವನ್ನು ಕುಟುಂಬಸ್ಥರು ಚಿತ್ರದುರ್ಗದ ಶ್ರೀ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದೇಹದಾನ ಮಾಡಿದರು.
    ಅಕ್ಕಮಹಾದೇವಿ ಬಳಗದ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿರುವ ಇವರು ಅಕ್ಕಮಹಾದೇವಿ ಸಮುದಾಯ ಭವನ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲೂ ಸೇವೆ ಸಲ್ಲಿಸಿದ್ದರು. 
    ಸುವರ್ಣಮ್ಮ ಹಿರೇಮಠ್ ರವರ ನಿಧನಕ್ಕೆ ಅಕ್ಕಮಹಾದೇವಿಬಳಗದ ಸಂಚಾಲಕ ಟಿ.ಜಿ ಬಸವರಾಜಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಕೆ ಎಸ್ ವಿಜಯಕುಮಾರ್, ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರಮುಖರು ಮುಂತಾದವರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.