ನರಸಮ್ಮ ನಿಧನ 


ನರಸಮ್ಮ 
    ಭದ್ರಾವತಿ : ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ, ಗೋಲ್ಡನ್ ಜ್ಯೂಬಿಲಿ ಹುತ್ತಾ ಕಾಲೋನಿ ನಿವಾಸಿ ಮರಿಯಪ್ಪ ಅವರ ಧರ್ಮಪತ್ನಿ ನರಸಮ್ಮ(೮೦) ನಿಧನ ಹೊಂದಿದರು. 
    ಇವರಿಗೆ ನಾಲ್ವರು ಪುತ್ರರು ಹಾಗು ಪುತ್ರಿ ಇದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಶನಿವಾರ ಸಂಜೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.  
    ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸೇರಿದಂತೆ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.