ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ, ಕೆ.ಎಚ್ ಮುನಿಯಪ್ಪರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ 


ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಅಧ್ಯಕ್ಷ ಎಸ್. ಪುಟ್ಟರಾಜು ಸೇರಿದಂತೆ ಇನ್ನಿತರರು ಮಾತನಾಡಿದರು. 
    ಭದ್ರಾವತಿ:  ಜಿಲ್ಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾಗಿರುವ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಆಗ್ರಹಿಸಿದೆ. 
    ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎಸ್. ಪುಟ್ಟರಾಜು, ಕ್ಷೇತ್ರದಲ್ಲಿ ೪ ಬಾರಿ ಗೆಲುವು ಸಾಧಿಸಿ ಶಾಸಕರಾಗಿ ಸೇವೆ ಸಲ್ಲಿಸುವ ಮೂಲಕ ಹೆಚ್ಚಿನ ಅನುಭವ ಹೊಂದಿರುವ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು. ಇದರಿಂದ ಜಿಲ್ಲೆಯ ಸರ್ವತೋರ್ಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಅದರಲ್ಲೂ ವಿಶೇಷ ಭದ್ರಾವತಿ ವಿಧಾನ ಸಭಾ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ. ಆ ಮೂಲಕ ಕ್ಷೇತ್ರದಲ್ಲಿ ಪುನಃ ಇತಿಹಾಸದ ವೈಭವ ಮರಳಲಿದೆ ಎಂದರು. 
    ಇದೆ ರೀತಿ ರಾಜ್ಯದಲ್ಲಿ ೭ ಬಾರಿ ಸತತವಾಗಿ ಸಂಸದರಾಗಿ, ಕೇಂದ್ರ ಸರ್ಕಾರದ ಹಲವು ಉನ್ನತ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ಅಪಾರ ಅನುಭವ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕರು, ಧುರೀಣರಾಗಿರುವ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜ ಇಲಾಖೆ ಸಚಿವರಾಗಿ ಸೇರವೆ ಸಲ್ಲಿಸಿರುವ ಪರಿಶಿಷ್ಠ ಜಾತಿ ಮಾದಿಗ ಜನಾಂಗದವರಾದ  ಕೆ.ಎಚ್ ಮುನಿಯಪ್ಪನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ, ಕರುನಾಡಿನ ಆಶಾಕಿರಣ, ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿಸಿದ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. 
    ಪ್ರಮುಖರಾದ ಚಂದ್ರಪ್ಪ ಕೂಡ್ಲಿಗೆರೆ, ಕುಬೇಂದ್ರಪ್ಪ, ಮಹೇಶ್ ಕುಮಾರ್, ಕಿಶೋರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.