ಜಾತಿ, ಮತಪಂಥಗಳನ್ನು ಮೀರಿದ ವ್ಯಕ್ತಿ ನಾಡಪ್ರಭು ಕೆಂಪೇಗೌಡ


ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. 
    ಭದ್ರಾವತಿ : ನಾಡಪ್ರಭು ಕೆಂಪೇಗೌಡರು ಜಾತಿ, ಮತಪಂಥಗಳನ್ನು ಮೀರಿದ ವ್ಯಕ್ತಿಯಾಗಿದ್ದು, ಅಭಿವೃದ್ಧಿ ಹರಿಕಾರರಾಗಿ ಭವಿಷ್ಯಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸಿದ್ದರು ಎಂದು ನಗರದ ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು. 
    ಅವರು ವೇದಿಕೆಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆರೆಕಟ್ಟೆಗಳ ನಿರ್ಮಾಣದ ಮೂಲಕ ನೀರಾವರಿ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಬೃಹತ್ ಬೆಂಗಳೂರು ನಗರ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದ ಕೆಂಪೇಗೌಡರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಎಲ್ಲಾ ಧರ್ಮ, ಜಾತಿ, ಜನಾಂಗದವರಿಗೂ ಒಂದೆಡೆ ನೆಲೆ ಕಲ್ಪಿಸಿಕೊಡುವ ಮೂಲಕ ಅವರ ಏಳಿಗೆಗಾಗಿ ಶ್ರಮಿಸಿದ್ದರು ಎಂದರು. 
     ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ  ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪುಷ್ಪ ಕೇಶವ, ಗಾಯತ್ರಿ ಯಲ್ಲಪ್ಪ ಮತ್ತು ಲೀಲಾ ಗಂಗಾಧರ ಗೌಡ್ರು ಉಪಸ್ಥಿತರಿದ್ದು, ಕಾರ್ಯದರ್ಶಿ ಪ್ರತಿಭಾ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿಕುಮಾರ್ ಹಾಗು ನಿರ್ದೇಶಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.