ರಾಜ್ಯಸಭೆ ಅಭ್ಯರ್ಥಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಶಾಸಕ ಬಿ.ಕೆ ಸಂಗಮೇಶ್ವರ್
ಕ್ಷೇತ್ರದಲ್ಲಿ ೪ ಬಾರಿ ಆಯ್ಕೆ, ಕೋಮುವಾದಿಗಳ ತಡೆಯುವಲ್ಲಿ ಯಶಸ್ವಿ, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಿ
ರಾಜ್ಯಸಭೆ ಅಭ್ಯರ್ಥಿಯಾಗಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಆಶೀರ್ವಾದ ಪಡೆಯುವ ಜೊತೆಗೆ ರಾಜ್ಯಸಭೆಗೆ ಖರ್ಗೆಯವರ ಆಯ್ಕೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭದ್ರಾವತಿ : ರಾಜ್ಯಸಭೆ ಅಭ್ಯರ್ಥಿಯಾಗಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಆಶೀರ್ವಾದ ಪಡೆಯುವ ಜೊತೆಗೆ ರಾಜ್ಯಸಭೆಗೆ ಖರ್ಗೆಯವರ ಆಯ್ಕೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿರುವ ಖರ್ಗೆ ಅವರನ್ನು ಭೇಟಿ ಮಾಡಿದ ಸಂಗಮೇಶ್ವರ್ ಅವರು ಹೂ ಗುಚ್ಛ ನೀಡಿ ಈ ಬಾರಿ ಸಹ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವಲ್ಲಿ ಖರ್ಗೆಯವರ ಮಾರ್ಗದರ್ಶನ ಅಗತ್ಯವಾಗಿದೆ ಎಂದರು.
ಕ್ಷೇತ್ರದಲ್ಲಿ ೪ ಬಾರಿ ಗೆಲುವು ಸಾಧಿಸುವ ಮೂಲಕ ಕೋಮುವಾದಿಗಳನ್ನು ಸೆದೆಬಡಿಯುವಲ್ಲಿ ಯಶಸ್ವಿಯಾಗಿದ್ದೇನೆ. ಇದುವರೆಗೂ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚಿನ ಶ್ರಮವಹಿಸಿದ್ದೇನೆ. ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಏಕೈಕ ಹಿರಿಯ ಶಾಸಕನಾಗಿದ್ದು, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಿಕೊಡುವಂತೆ ಖರ್ಗೆಯವರಿಗೆ ಸಂಗಮೇಶ್ವರ್ ಮನವಿ ಮಾಡಿದರು.
ಇದೆ ವೇಳೆ ನೂತನ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಸಂಗಮೇಶ್ವರ್‌ರವರು ಅಭಿನಂದಿಸುವ ಮೂಲಕ ಶುಭಕೋರಿದರು.
ಸಂಗಮೇಶ್ವರ್‌ರವರು ನೂತನ ಸಚಿವರಾದ ಈಶ್ವರ್ ಖಂಡ್ರೆ, ಡಾ. ಜಿ. ಪರಮೇಶ್ವರ್ ಸೇರಿದಂತೆ ಇನ್ನಿತರ ಸಚಿವರನ್ನು ಭೇಟಿ ಮಾಡಿ ಶುಭಕೋರಿದರು.
