ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್‌ಗೆ ಸನ್ಮಾನ
ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ, ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ೨೦೨೪ ಹಾಗು ೨೦೨೫ನೇ ಸಾಲಿನ ಕನ್ನಡ ಕುವರ-ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ, ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ೨೦೨೪ ಹಾಗು ೨೦೨೫ನೇ ಸಾಲಿನ ಕನ್ನಡ ಕುವರ-ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಪೇಕ್ಷ ನೃತ್ಯ ಕಲಾವೃಂದ ಬೆಳವಣಿಗೆಯಲ್ಲಿ ಶಿವಕುಮಾರ್‌ರವರ ಪಾತ್ರ ಹೆಚ್ಚಿನದ್ದಾಗಿದ್ದು, ಪ್ರತಿ ವರ್ಷ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಹೆಚ್ಚಿನ ಶ್ರಮವಹಿಸುತ್ತಿದ್ದಾರೆ. ವಿಜೇತರಿಗೆ ಬಹುಮಾನಗಳು ಹಾಗು ಕಾರ್ಯಕ್ರಮದ ಸಂಪೂರ್ಣ ದಾಸೋಹ ಮತ್ತು ಸಭಾಭವನ ವ್ಯವಸ್ಥೆ ಸೇರಿದಂತೆ ಇನ್ನಿತರ ಸೇವೆಗಳನ್ನು ಉಚಿತವಾಗಿ ಕೈಗೊಳ್ಳುತ್ತಿದ್ದಾರೆ. ಇವರ ಸೇವೆಯನ್ನು ಅಪೇಕ್ಷ ನೃತ್ಯ ಕಲಾವೃಂದ ಸ್ಮರಿಸುವ ಮೂಲಕ ಗೌರವಿಸಿದೆ.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಮಣಿಶೇಖರ್, ಸ್ತ್ರೀ ರೋಗ ತಜ್ಞೆ ಡಾ. ವರ್ಷ, ಅಪೇಕ್ಷ ನೃತ್ಯ ಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ, ಅಪೇಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
