ದ್ವಿಚಕ್ರ ವಾಹನ-ಕಾರು ನಡುವೆ ಅಪಘಾತ : ದಂಪತಿ ಗಾಯ
ಭದ್ರಾವತಿ: ನಗರದ ಶಿವನಿ ತಿರುವಿನ ಬಳಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಮಂಗಳವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪನ್ನೀರು ಸೆಲ್ವ (೭೦) ಮತ್ತು ಕುಪಂ ರಾಣಿ (೬೨) ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವನಿ ತಿರುವಿನ ಹತ್ತಿರದ ಆಲೆಮನೆಯೊಂದರಿಂದ ನಗರಕ್ಕೆ ಬರುತ್ತಿರುವಾಗ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.
