ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಗಣತಿ ಅರ್ಜಿ ವಿತರಿಸುವ ಕಾರ್ಯಕ್ಕೆ ಚಾಲನೆ
ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನಿವಾಸಗಳಿಗೆ ಚುನಾವಣಾ ಅಧಿಕಾರಿಗಳ ತಂಡ ಭೇಟಿ
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಮನೆಗೆ ತೆರಳಿದ ತಾಲೂಕು ಚುನಾವಣಾ ಅಧಿಕಾರಿಗಳ ತಂಡ ಮತದಾರರ ಗಣತಿ ನಮೂನೆಗಳನ್ನು ವಿತರಿಸಿತು. ಬಿ.ಕೆ ಮೋಹನ್, ಬಿ.ಎಸ್ ಗಣೇಶ್, ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ಬಿ.ಎಂ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಮನೆ ಮನೆಗೆ ತೆರಳಿ ಮತದಾರರ ಗಣತಿ ಅರ್ಜಿಗಳನ್ನು ವಿತರಿಸುವ ಕಾರ್ಯ ಆರಂಭಗೊಂಡಿದೆ.
ಜು.೨೯ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲಿದ್ದು, ನಂತರ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಆ.೫ರಂದು ಮತದಾರರ ಪಟ್ಟಿ ಬಿಡುಗಡೆಗೊಳಿಸಲಿದ್ದು, ಸೆ.೪ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಅ.೩ರವರೆಗೆ ಆಕ್ಷೇಪಣೆಗಳ ಪರಿಶೀಲನೆ ನಡೆಯಲಿದ್ದು, ಅ.೭ರಂದು ಅಂತಿಮ ಮತದಾರರ ಪಟ್ಟಿ ಬಿಡುಯಾಗಲಿದೆ.
ಮನೆ ಮನೆ ಭೇಟಿಯ ವೇಳೆ ಪ್ರತಿ ಮನೆಗೂ ಎರಡು ನಮೂನೆಗಳನ್ನು ದ್ವಿತಿಯಲ್ಲಿ ನೀಡಿ, ಹೊಸ ಮಾಹಿತಿಯನ್ನು ಹಿಂಪಡೆದು, ಅದರಲ್ಲಿ ಒಂದು ನಮೂನೆಯನ್ನು ಅಧಿಕಾರಿಗಳು ಸಹಿ ಮಾಡಿ ಮತದಾರರಿಗೆ ಹಿಂದಿರುಗಿಸಲಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ಆಯೋಗ ಸೂಚಿಸಿದ ೧೨ ರೀತಿಯ ಮಾಹಿತಿಯಲ್ಲಿ ಯಾವುದಾದರೊಂದನ್ನು ಪುರಾವೆಯಾಗಿ ಪಡೆದುಕೊಳ್ಳುವರು.
ಶಾಸಕ ಬಿ.ಕೆ ಸಂಗಮೇಶ್ವರ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಅವರ ನಿವಾಸಗಳಿಗೆ ಮತಗಟ್ಟೆ ಅಧಿಕಾರಿಗಳೊಂದಿಗೆ ತೆರಳಿದ ಆಯುಕ್ತ ಕೆ.ಎನ್ ಹೇಮಂತ್. ಹಾಗೂ ತಹಶೀಲ್ದಾರ್ ಪ್ರದೀಪ್ ದೇವಗಿರಿ, ಚುನಾವಣಾ ಶಿರಸ್ತೇದಾರ್ ಗಿರಿರಾಜ್ ಮನೆಯ ಸದಸ್ಯರುಗಳಿಗೆ ಅರ್ಜಿಗಳನ್ನು ವಿತರಿಸಿ ಭರ್ತಿ ಮಾಡುವ ವಿಧಾನ ಕುರಿತು ಮಾಹಿತಿ ತಿಳಿಸಿದರು.
ಶಾಸಕ ಬಿಕೆ ಸಂಗಮೇಶ್ವರ ಮನೆಗೆ ತೆರಳಿದ ಸಂದರ್ಭದಲ್ಲಿ ಮನೆಯ ಸದಸ್ಯರುಗಳಾದ ಬಿ.ಕೆ.ಮೋಹನ್, ಬಿ.ಎಸ್ ಗಣೇಶ್. ಬಿ.ಎಂ ಮಂಜುನಾಥ್ ಸೇರಿದಂತೆ ಇನ್ನಿತರರಿದ್ದರು.
ಭದ್ರಾವತಿಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಅವರ ಮನೆಗೆ ತೆರಳಿದ ಮತಗಟ್ಟೆ ಅಧಿಕಾರಿಗಳು ಮತದಾರರ ಗಣತಿ ನಮೂನೆಗಳನ್ನು ವಿತರಿಸಿದರು.

.jpg)