ನಿರ್ಮಲ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ
ಭದ್ರಾವತಿ ಹಳೇನಗರದ ನಿರ್ಮಲ ಆಸ್ಪತ್ರೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.
ಭದ್ರಾವತಿ : ಹಳೇನಗರದ ನಿರ್ಮಲ ಆಸ್ಪತ್ರೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.
ಹಿರಿಯ ವೈದ್ಯರಾದ ಸಿಸ್ಟರ್ ಡಾ. ರೆಜೀನಾ, ಡಾ. ಆರ್.ಸಿ ಬೆಂಗಳೂರಿ ಮತ್ತು ಇನ್ನಿತರ ವೈದ್ಯರು ಸೇರಿ ಕೇಕ್ ಕತ್ತರಿಸುವ ಮೂಲಕ ಆಚರಣೆಗೆ ಚಾಲನೆ ನೀಡಿದರು. ಡಾ. ಮಲ್ಲಿಕಾರ್ಜುನ್ ವೈದ್ಯರ ದಿನಾಚರಣೆಯ ಮಹತ್ವ ವಿವರಿಸಿದರು. ಆಸ್ಪತ್ರೆ ಸುಪೀರಿಯರ್ ಸಿಸ್ಟರ್ ವಿಲ್ಮಾ ವೈದ್ಯರ ಕುರಿತು ಮೆಚ್ಚುಗೆಯ ಮಾತುಗಳನಾಡಿದರು. ಡಾ. ಸ್ವರ್ಣಲತಾ ತಮ್ಮ ಅನಿಸಿಕೆಗಳನ್ನು ತಿಳಿಸಿದರು.
ನರ್ಸಿಂಗ್ ಸೂಪರಿಂಟೆಂಡೆಂಟ್ ಸಿಸ್ಟರ್ ವಿನ್ಸಿ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದು, ಸಿಬ್ಬಂದಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಗರದ ವಿವಿಧ ಆಸ್ಪತ್ರೆಗಳ ವೈದ್ಯರು ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ರೋಗಿಗಳ ಪರಿಚಾರಕರು ಪಾಲ್ಗೊಂಡಿದ್ದರು.
