ಓಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು


   
ಭದ್ರಾವತಿ : ಸಾರ್ವಜನಿಕರನ್ನು ಗುಂಪು ಸೇರಿಸಿಕೊಂಡು ರಸ್ತೆಯಲ್ಲಿ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ನಗರದ ಬಿ.ಎಚ್ ರಸ್ತೆ, ರೈಲ್ವೆ ನಿಲ್ದಾಣದಿಂದ ಮೂಪಾ ಕಾಂಪೌಂಡ್ ಕಡೆಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೋರ್ವ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿ ಚಿಕ್ಕಪ್ಪ ಸಣ್ಣತಂಗೇರ ದಾಳಿ ನಡೆಸಿದ್ದು, ನ್ಯಾಯಾಲಯದ ಅನುಮತಿ ಪಡೆದು ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.