ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು ಸಾವು
ಭದ್ರಾವತಿ : ಎಲ್‌ಕೆಜಿ ಮಗು ಶಾಲೆಯಿಂದ ಮನೆಗೆ ತೆರಳುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಘಟನೆ ಮಂಗಳವಾರ ನಡೆದಿದೆ.
ಗ್ರಾಮದ ನಿವಾಸಿ ನಸ್ರುಲ್ಲಾ ಎಂಬುವರ ಪುತ್ರ ನಾಲ್ಕೂವರೆ ವರ್ಷದ ಮೊಹಮ್ಮದ್ ಮುನಾವರ್ ತೈಫ್ ಮೃತ ದುರ್ದೈವಿಯಾಗಿದ್ದು, ಈ ಬಾಲಕನನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿಗೆ ದಾಖಲಿಸಲಾಗಿತ್ತು. ಸೋಮವಾರ ಮೊದಲ ದಿನ ಶಾಲೆಗೆ ಆಗಮಿಸಿದ್ದ ಬಾಲಕ ಎರಡನೇ ದಿನ ಮಂಗಳವಾರ ತರಗತಿ ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ದೊಣಬಘಟ್ಟ ಗ್ರಾಮದಲ್ಲಿ ಶೋಕದ ವಾತಾವರಣ ಕಂಡು ಬರುತ್ತಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
