`ಮ್ಯಾರಥ್ಯಾನ್ ಓಟ'ದ ಮೂಲಕ ರಕ್ತದಾನ ಶಿಬಿರ ಕುರಿತು ಜಾಗೃತಿ



ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.೧೯ರ ಭಾನುವಾರ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿಯಾಗಿ ಶನಿವಾರ ಬೆಳಿಗ್ಗೆ ಲಯನ್ಸ್ ಕ್ಲಬ್ ವತಿಯಿಂದ ಮ್ಯಾರಥಾನ್ ಓಟ ಆಯೋಜಿಸಲಾಗಿತ್ತು. 
    ಭದ್ರಾವತಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.೧೯ರ ಭಾನುವಾರ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿಯಾಗಿ ಶನಿವಾರ ಬೆಳಿಗ್ಗೆ ಲಯನ್ಸ್ ಕ್ಲಬ್ ವತಿಯಿಂದ ಮ್ಯಾರಥಾನ್ ಓಟ ಆಯೋಜಿಸಲಾಗಿತ್ತು. 
      ನಗರದ ರಂಗಪ್ಪ ವೃತ್ತದಲ್ಲಿ ಮ್ಯಾರಥಾನ್ ಓಟಕ್ಕೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಚಾಲನೆ ನೀಡಿದರು. ರಂಗಪ್ಪ ವೃತ್ತದಿಂದ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಹುತ್ತಾಕಾಲೋನಿ ನಮ್ಮ ಭದ್ರಾವತಿ ವೃತ್ತದವರೆಗೂ ಮ್ಯಾರಥಾನ್ ಓಟ ನಡೆಯಿತು. 
    ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಹಳೇನಗರ ಮಹಿಳಾ ಸೇವಾ ಸಮಾಜ, ಲಯನ್ಸ್ ಕ್ಲಬ್ ಶುಗರ್ ಟೌನ್, ಅಪರಂಜಿ ಶಿವರಾಜ್ ಅಭಿನಯ ಶಾಲೆ  ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಪೊಲೀಸ್ ಇಲಾಖೆ, ಗೃಹ ರಕ್ಷಕದಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.