ಸುದ್ದಿಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪತ್ರಕರ್ತರು ಗಮನ ಹರಿಸಿ : ಸಂಸದ ಬಿ.ವೈ ರಾಘವೇಂದ್ರ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಆಶಾಕಿರಣ ಮಾದಕ ಮತ್ತು ಮದ್ಯ ವ್ಯಸನಗಳ ಸಮಗ್ರ ಪುನರ್ವತಿ ಕೇಂದ್ರದ ಫಾ. ಪ್ರಕಾಶ್ ಕೊಲಾಕೊ, ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಗದ್ದುಗೆ ಮಠದ ತಿಪ್ಪೇಸ್ವಾಮಿ(ರುದ್ರೇಶ ಶಾಸ್ತ್ರಿ) ಮತ್ತು ಜಮಾಹತೆ ಇಸ್ಲಾಮಿ-ಇ-ಹಿಂದ್ ಅಧ್ಯಕ್ಷ ಸುಲ್ತಾನ್ ಬೇಗ್ ಸರ್ವಧರ್ಮಿಯರು ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿದರು.
ಭದ್ರಾವತಿ: ವೇಗವಾಗಿ ಸುದ್ದಿ ನೀಡುವುದ್ದಕ್ಕಿಂತ ಸುದ್ದಿಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪತ್ರಕರ್ತರು ಗಮನ ಹರಿಸಬೇಕು. ವಸ್ತುನಿಷ್ಠ ಹಾಗು ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವ ಗಟ್ಟಿಗೊಳಿಸುತ್ತದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು, ವಿಶ್ವದ ಯಾವುದೇ ಮೂಲೆಯಲ್ಲಿ ನಡೆಯುವ ವಿದ್ಯಮಾನದ ಮಾಹಿತಿ ಕ್ಷಣಮಾತ್ರದಲ್ಲೇ ನಮ್ಮ ಅಂಗೈನಲ್ಲಿರುವ ಮೊಬೈಲ್ ಫೋನಿನಲ್ಲಿ ದೊರೆಯುತ್ತಿದ್ದರೂ ಸಹ ಬಹಳಷ್ಟು ವಿದ್ಯಾಮಾನಗಳ ಕುರಿತ ಮಾಹಿತಿಯ ನೈಜತೆ ಪ್ರಶ್ನಿಸುವಂತಾಗಿದೆ ಎಂದರು.
ಪತ್ರಿಕೆಗಳು ಪ್ರಜಾಪ್ರಭುತ್ವದ ಉಸಿರು. ಚುನಾಯಿತ ಪ್ರತಿನಿಧಿಗಳ ಕರ್ತವ್ಯ ನಿರ್ವಹಣೆಯಲ್ಲಿ ಲೋಪವಾದಾಗ ಅವರನ್ನು ಎಚ್ಚರಿಸುವ ಕೆಲಸವನ್ನು ಪತ್ರಿಕೆಗಳು ಮಾಡುತ್ತವೆ ಎಂದರು.
ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ರಸ್ತೆ ಅಪಘಾತಗಳು ಹಾಗು ಗಂಭೀರ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ರಕ್ತಕ್ಕೆ ಬೇಡಿಕೆ ಹೆಚ್ಚಾಗಿದೆ. ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆಯಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ರಕ್ತದಾನಿಗಳಾದ ರಾಜು ನರಸಯ್ಯ, ಹಾಲೇಶಪ್ಪ ಹಾಗು ವಿಲ್ಸನ್ ಅವರನ್ನು ಸನ್ಮಾನಿಸಲಾಯಿತು.
ಪ್ರತಿಕಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಸಂಘದ ಹಿರಿಯ ಸದಸ್ಯರಾದ ಅನಂತಕುಮಾರ್ ಅವರನ್ನು ದಂಪತಿ ಸಮೇತ ಸನ್ಮಾನಿಸಿ ಗೌರರ್ವಾಪಣೆ ಸಲ್ಲಿಸಲಾಯಿತು. ಅಲ್ಲದೆ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ರಕ್ತದಾನಿಗಳಾದ ರಾಜು ನರಸಯ್ಯ, ಹಾಲೇಶಪ್ಪ ಹಾಗು ವಿಲ್ಸನ್ ಅವರನ್ನು ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾ ರಾಜಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಯು. ವೈದ್ಯನಾಥ, ಲಯನ್ಸ್ ಕ್ಲಬ್ ಅಧ್ಯಕ್ಷ ಡಿ. ಶಂಕರಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಆಶಾಕಿರಣ ಮಾದಕ ಮತ್ತು ಮದ್ಯ ವ್ಯಸನಗಳ ಸಮಗ್ರ ಪುನರ್ವತಿ ಕೇಂದ್ರದ ಫಾ. ಪ್ರಕಾಶ್ ಕೊಲಾಕೊ, ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಗದ್ದುಗೆ ಮಠದ ತಿಪ್ಪೇಸ್ವಾಮಿ(ರುದ್ರೇಶ ಶಾಸ್ತ್ರಿ) ಮತ್ತು ಜಮಾಹತೆ ಇಸ್ಲಾಮಿ-ಇ-ಹಿಂದ್ ಅಧ್ಯಕ್ಷ ಸುಲ್ತಾನ್ ಬೇಗ್ ಸರ್ವಧರ್ಮಿಯರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಬೆಳಿಗ್ಗೆ ೮.೩೦ರಿಂದ ಸಂಜೆ ೪ ಗಂಟೆವರೆಗೂ ನಡೆದ ಶಿಬಿರದಲ್ಲಿ ದಾಖಲೆಯ ಸುಮಾರು ೨೫೦ ಯೂನಿಟ್ ರಕ್ತ ಸಂಗ್ರಹವಾಗಿದೆ.
ಆಶಾಜ್ಯೋತಿ ರಕ್ತನಿಧಿ ಕೇಂದ್ರ, ಜೀವ ಸಂಜೀವಿನಿ ರಕ್ತನಿಧಿ ಕೇಂದ್ರ, ಡಾ. ಬಿ.ಆರ್ ಅಂಬೇಡ್ಕರ್ ರಕ್ತನಿಧಿ ಕೇಂದ್ರ, ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ, ಸುಬ್ಬಯ್ಯ ಆಸ್ಪತ್ರೆ ರಕ್ತನಿಧಿ ಕೇಂದ್ರ ಹಾಗು ರೋಟರಿ ರಕ್ತನಿಧಿ ಕೇಂದ್ರ ಶಿಬಿರದಲ್ಲಿ ದಾನಿಗಳಿಂದ ರಕ್ತದಾನ ಸಂಗ್ರಹಿಸಿದವು. ಬೃಹತ್ ರಕ್ತದಾನ ಶಿಬಿರ ಆಯೋಜನೆಗೆ ಸಾಕಷ್ಟು ಪ್ರಶಂಸೆಗಳು ವ್ಯಕ್ತವಾದವು. ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಬಸವರಾಜ ಸ್ವಾಗತಿಸಿ, ಖಜಾಂಚಿ ಫಿಲೋಮಿನಾ ಆರ್. ಅಂತೋಣಿ ವಂದಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆಯಲ್ಲಿ ಪ್ರತಿಕಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಸಂಘದ ಹಿರಿಯ ಸದಸ್ಯರಾದ ಅನಂತಕುಮಾರ್ ಅವರನ್ನು ದಂಪತಿ ಸಮೇತ ಸನ್ಮಾನಿಸಿ ಗೌರರ್ವಾಪಣೆ ಸಲ್ಲಿಸಲಾಯಿತು.
ಭದ್ರಾವತಿ ಪತ್ರಿಕಾ ಭವನ ಟ್ರಸ್ಟ್, ಪೊಲೀಸ್ ಇಲಾಖೆ, ಆರ್‌ಎಎಫ್, ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ನಗರಸಭೆ, ಅಬಕಾರಿ ಇಲಾಖೆ, ಗೃಹ ರಕ್ಷಕದಳ, ಆರೋಗ್ಯ ಇಲಾಖೆ, ಪೌರ ಸೇವಾ ನೌಕರರ ಸೇವಾ ಸಂಘ, ಲಯನ್ಸ್ ಕ್ಲಬ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಪರಂಜಿ ಶಿವರಾಜ್ ಅಭಿನಯ ಶಾಲೆ, ಉಸ್ಮಾನಿಯ ಚಾರಿಟಬಲ್ ಟ್ರಸ್ಟ್ , ಕಾರುಣ್ಯ ಚಾರಿಟಬಲ್, ಟ್ರಸ್ಟ್(ರಿ), ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್, ಡಾ. ರಾಜ್ ಕುಮಾರ್ ಮತ್ತು ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ, ಯುನೈಟೆಡ್ ಕ್ರಿಶ್ಚಿಯನ್ ಅಸೋಷಿಯೇಷನ್ , ಕನ್ನಡ ಸಾಹಿತ್ಯ ಪರಿಷತ್ತು, ವಕೀಲರ ಸಂಘ, ರೋಟರಿ ಕ್ಲಬ್ , ವರ್ತಕರ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ, ತಾಲೂಕು ಪಡಿತರ ವಿತರಕರ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ, ಅಖಿಲ ಕರ್ನಾಟಕ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ,ಮಾನವ ಹಕ್ಕುಗಳ ಹೋರಾಟ ಸಮಿತಿ, ಹಳೇನಗರ ಮಹಿಳಾ ಸೇವಾ ಸಮಾಜ, ವೀರಶೈವ ಸೇವಾ ಸಮಿತಿ, ಗೆಳೆಯರ ಬಳಗ, ದೇಶ ಪ್ರೇಮಿ ಟಿಪ್ಪು ಯುವಕರ ಸಂಘ, ಕಲಾವಿದರ ಸಂಘ, ಗುರು ಆರ್ಟ್ಸ್, ಮಧು ಲ್ಯಾಬೋರೇಟರಿ, ಲಯನ್ಸ್ ಕ್ಲಬ್ ಶುಗರ್ ಟೌನ್, ಅಪೇಕ್ಷ ನೃತ್ಯ ಕಲಾವೃಂದ, ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ, ಮನೆ ಮಾಲೀಕರ ಸಂಘ, ವೀರಶೈವ ಲಿಂಗಾಯಿತ ಮಹಿಳಾ ಸಮಾಜ, ಕೇರಳ ಮಹಿಳಾ ಸಮಾಜಂ, ಚುಂಚಾದ್ರಿ ಮಹಿಳಾ ವೇದಿಕೆ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ, ಸುರಕ್ಷಾ ಸೇವಾ ಟ್ರಸ್ಟ್, ಮದ್ಯ ಮಾರಾಟಗಾರರ ಸಂಘ, ಬೆಳಕು ಚಾರಿಟಬಲ್ ಟ್ರಸ್ಟ್, ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರ ಮೆಡಿಕಲ್ ಕಾಲೇಜ್, ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘ, ತಾಲೂಕು ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಯುನೈಟೆಡ್ ಕ್ರಿಶ್ಚಿಯನ್ ಅಸೋಷಿಯೇಷನ್ ಮಹಿಳಾ ಘಟಕ, ವಂದೇ ಮಾತರಂ ಟ್ರಸ್ಟ್, ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಅಂಜುಮನ್-ಇಸ್ಲಾವುಲ್-ಮುಸ್ಲಿಮೀನ್ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು, ಬೃಹತ್ ರಕ್ತದಾನ ಶಿಬಿರಕ್ಕೆ ಸಹಕಾರ ನೀಡಿದ್ದವು.

.jpg)
.jpg)
.jpg)