ಗಾಣಿಗ ಸಂಘದ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಟಿ. ವೆಂಕಟೇಶ್ ಆಗ್ರಹ
ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಗಾಣಿಗರ ಸಂಘ ಪ್ರಮುಖರು ಮಾತನಾಡಿದರು.
ಭದ್ರಾವತಿ: ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ರಾಜಕಾರಣದಲ್ಲಿ ಹೆಚ್ಚಿನ ಅನುಭವ ಹೊಂದಿರುವ ಗಾಣಿಗ ಸಮಾಜದ ಹಿರಿಯರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಗಾಣಿಗರ ಸಂಘ ಆಗ್ರಹಿಸಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಟಿ. ವೆಂಕಟೇಶ್, ಸರ್ವ ಜನಾಂಗವನ್ನು ಪ್ರೀತಿಸುವ ಜೊತೆಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿರುವ, ಅಭಿವೃದ್ಧಿ ಹರಿಗಾರರಾಗಿರುವ ಗಾಣಿಗರ ಸಮಾಜದ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.
ಸಂಘದ ಇನ್ನಿತರ ಪದಾಧಿಕಾರಿಗಳು, ಪ್ರಮುಖರು ಮಾತನಾಡಿ, ಕ್ಷೇತ್ರದಲ್ಲಿ ಸುಮಾರು ೩೦೦೦ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ೭೫೦ ಕುಟುಂಬಗಳಿವೆ. ಈ ಪೈಕಿ ಸಂಘದಲ್ಲಿ ೧೬೦೦ ಜನ ಸದಸ್ಯರಿದ್ದಾರೆ. ಕಳೆದ ೧೪ ವರ್ಷಗಳಿಂದ ಬಿ.ಕೆ ಸಂಗಮೇಶ್ವರ್ ಅವರು ಸಂಘದ ಗೌರವಾಧ್ಯಕ್ಷರಾಗಿ ಗಾಣಿಗರ ಸಮಾಜದ ಬೆಳವಣಿಗೆಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಜನಾಂಗದ ಅಭಿವೃದ್ಧಿ ಜೊತೆಗೆ 'ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗೆ ಈ ಬಾರಿ ಸಚಿವ ಸಂಪುಟದಲ್ಲಿ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದರು.
ಸಮಾಜದ ಶ್ರೀ ಅನಂತಾನಂದ ಸ್ವಾಮೀಜಿ, ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಬಸವರಾಜ್, ಉಪಾಧ್ಯಕ್ಷ ರಾಮಶೆಟ್ಟಿ, ಡಿ.ಸಿ ಶಶಿಕುಮಾರ್, ವರದರಾಜು, ಯೋಗೇಶ್, ಆರ್. ಮೋಹನ್ ಕುಮಾರ್, ಶಿವಕುಮಾರ್, ಶಾಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
