ಜೆ.ಎಂ.ಎಫ್.ಸಿ ನ್ಯಾಯಾಲದ ಆವರಣದಲ್ಲಿ ಇ-ಸೇವಾ ಕೇಂದ್ರ


ಭದ್ರಾವತಿ ನಗರದ ರಂಗಪ್ಪ ವೃತ್ತದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ಮುನಿರಾಜು ಇ- ಸೇವಾ ಕೇಂದ್ರ ಉದ್ಘಾಟಿಸಿದರು.
    ಭದ್ರಾವತಿ: ನಗರದ ರಂಗಪ್ಪ ವೃತ್ತದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ಮುನಿರಾಜು ಇ- ಸೇವಾ ಕೇಂದ್ರ ಉದ್ಘಾಟಿಸಿದರು.
    ಬಹುನಿರೀಕ್ಷಿತ ಇ-ಸೇವಾ ಕೇಂದ್ರದಿಂದ ಹೆಚ್ಚಿನ ಅನುಕೂಲವಾಗಲಿದ್ದು, ಪ್ರತಿಯೊಬ್ಬರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂಬ ಆಶಯ ವ್ಯಕ್ತಪಡಿಸಲಾಯಿತು. ಪ್ರಧಾನ ಹಿರಿಯ ವಿಭಾಗದ ನ್ಯಾಯಾಧೀಶರಾದ ಡಿ. ರಾಘವೇಂದ್ರ, ಹೆಚ್ಚುವರಿ ಹಿರಿಯ ವಿಭಾಗದ ನ್ಯಾಯಾಧೀಶರಾದ ಜಿ.ಎಚ್ ಹನುಮಂತ, ಪ್ರಧಾನ ಕಿರಿಯ ವಿಭಾಗದ ನ್ಯಾಯಾಧೀಶರಾದ ವಿ. ರವಿಕುಮಾರ್, ಒಂದನೇ ಹೆಚ್ಚುವರಿ ಕಿರಿಯ ವಿಭಾಗದ ನ್ಯಾಯಾಧೀಶರಾದ ನಾಶೀರ ಬಾನು, ಎರಡನೇ ಹೆಚ್ಚುವರಿ ಕಿರಿಯ ವಿಭಾಗದ ನ್ಯಾಯಾಧೀಶರಾದ ಚೇತನಾ ಹಾಗೂ ನಾಲ್ಕನೇ ಹೆಚ್ಚುವರಿ ಕಿರಿಯ ವಿಭಾಗದ ನ್ಯಾಯಾಧೀಶರಾದ ಎನ್. ಗಿರಿಜಾ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಸಿ ಕೇಶವಮೂರ್ತಿ, ಉಪಾಧ್ಯಕ್ಷ ರಾಜು ಹಾಗೂ ಕಾರ್ಯದರ್ಶಿ ಎಂ. ಶಿವಕುಮಾರ್ ಮತ್ತು ನ್ಯಾಯದ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಕೀಲರು ಉಪಸ್ಥಿತರಿದ್ದರು.