ಸಂಚಾರಿ ನಿಯಮ ಉಲ್ಲಂಘನೆ : ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ



ಭದ್ರಾವತಿ ನಗರದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮೂಲಕ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ಸಂಖ್ಯೆ ಫಲಕ(ನಂಬರ್ ಫ್ಲೇಟ್) ಹೊಂದಿಲ್ಲದ ಹಾಗು ದೋಷಪೂರಿತ ಸೈಲೆನ್ಸರ್ ಹೊಂದಿರುವ ಸುಮಾರು ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. 
    ಭದ್ರಾವತಿ : ನಗರದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮೂಲಕ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ಸಂಖ್ಯೆ ಫಲಕ(ನಂಬರ್ ಫ್ಲೇಟ್) ಹೊಂದಿಲ್ಲದ ಹಾಗು ದೋಷಪೂರಿತ ಸೈಲೆನ್ಸರ್ ಹೊಂದಿರುವ ಸುಮಾರು ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. 
    ಪೊಲೀಸ್ ನಗರ ವೃತ್ತ ನಿರೀಕ್ಷಕಿ ನಾಗಮ್ಮರವರ ನೇತೃತ್ವದಲ್ಲಿ ಸಂಚಾರಿ ಠಾಣೆಯ ಉಪ ನಿರೀಕ್ಷಕರಾದ ಚಂದ್ರಶೇಖರ ನಾಯ್ಕ ಹಾಗು ರಾಜೇಶ್ ಸಂಗೊಳ್ಳಿ ಮತ್ತು ಸಿಬ್ಬಂದಿಗಳು ವಿಶೇಷ ಕಾರ್ಯಚರಣೆ ನಡೆಸಿದ್ದು, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ವಾಹನ ಚಾಲಕರು ಮತ್ತು ಮಾಲೀಕರ ವಾಹನ ದಾಖಲಾತಿಗಳನ್ನು ಪರಿಶೀಲಿಸಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು. 


    ಇತ್ತೀಚಿನ ವರ್ಷಗಳಲ್ಲಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಅಲ್ಲದೆ ಅಪಘಾತ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯಿಂದ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಾಹನ ಚಾಲಕರು, ಮಾಲೀಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಇಲಾಖೆ ಕೋರಿದೆ.