ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟ : ಬಲ್ಕೀಶ್ ಬಾನು
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಸಿರುವ ಪೊಲೀಸ್ ದೌರ್ಜನ್ಯ ಹಾಗು ಗೂಂಡಾಗಳ ಹಲ್ಲೆ ಖಂಡಿಸಿ ಗುರುವಾರ ಎನ್‌ಎಸ್‌ಯುಐ ಹಾಗು ಕಾಂಗ್ರೆಸ್ ಪಕ್ಷದ ವತಿಯಿಂದ ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ : ಪ್ರಶ್ನೆ ಪ್ರತಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಾಗು ಗೂಂಡಾಗಳನ್ನು ಬಳಸಿ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರತಿಭಟಿಸುವ ಹಕ್ಕು ಕಸಿದುಕೊಳ್ಳಲು ಯತ್ನಿಸುತ್ತಿದ್ದು, ಅಲ್ಲದೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಆರೋಪಿಸಿದರು.
ಅವರು ಗುರುವಾರ ಎನ್‌ಎಸ್‌ಯುಐ ಹಾಗು ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳು ತಮಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಅವರ ಹೋರಾಟಕ್ಕೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ವಿನಾಕಾರಣ ದೌರ್ಜನ್ಯ ನಡೆಸುತ್ತಿದೆ. ಹೋರಾಟ ಮೊಟಕುಗೊಳಿಸಲು ಮುಂದಾಗಿದ್ದು, ಆದರೆ ಇದಕ್ಕೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿಗಳ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಪ್ರಮುಖರಾದ ಪಿಎಲ್‌ಡಿ ಅಧ್ಯಕ್ಷ ಬಿ.ಕೆ ಶಿವಕುಮಾರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಮಾಜಿ ಉಪ ಮೇಯರ್ ಮಹಮದ್ ಸನವುಲ್ಲಾ, ನಗರಸಭೆ ಸ್ಥಾಯಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಕಾಂತರಾಜ್, ಜಾರ್ಜ್, ಆರ್. ಶ್ರೇಯಸ್, ವಿಲ್ಸನ್ ಬಾಬು, ಎಸ್.ಎಸ್ ಭೈರಪ್ಪ, ಜೆಬಿಟಿ ಬಾಬು, ತಾಲೂಕು ಕಾರ್ಪೆಂಟರ್ ಸಂಘದ ತಾಲೂಕು ಚಿನ್ನಪ್ಪ, ವಿದ್ಯಾರ್ಥಿ ಮುಖಂಡಾದ ಮುರುಗೇಶ್, ಮುಸ್ವೀರ್ ಬಾಷಾ ಸೇರಿದಂತೆ ವಿದ್ಯಾರ್ಥಿ ಸಂಘಟನೆಗಳ ಪ್ರಮುಖರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
