ಸರ್ಕಾರಿ ಶಾಲಾ ಮಕ್ಕಳಿಗೆ ಕರಾಟೆ ತರಬೇತಿ : ಸಹಕಾರ ನೀಡಲು ಮನವಿ

ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆಗೆ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ಬೆಂಬಲ


ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ, ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಸುಮಾರು ೪೦ ಕರಾಟೆ ವಿದ್ಯಾರ್ಥಿಗಳ ಪೈಕಿ ೧೦ ಮಂದಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ಓರ್ವ ವಿದ್ಯಾರ್ಥಿ ೩ನೇ ಸೌತ್ ಇಂಡಿಯನ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯ ಕಥಾ ಹಾಗೂ ಫೈಟ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಹೊಸಮನೆ, ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಸುಮಾರು ೪೦ ಕರಾಟೆ ವಿದ್ಯಾರ್ಥಿಗಳ ಪೈಕಿ ೧೦ ಮಂದಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.
    ಮುಖ್ಯೋಪಾಧ್ಯಾಯ ನಾಗರಾಜ್ ರವರ ಪ್ರೋತ್ಸಾಹದಿಂದ ಶಾಲೆಯ ಸುಮಾರು ೪೦ ವಿದ್ಯಾರ್ಥಿಗಳು ಕರಾಟೆ ಕ್ರೀಡೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ವಿದ್ಯಾರ್ಥಿಗಳ ಈ ಪೈಕಿ ಓರ್ವ ವಿದ್ಯಾರ್ಥಿ ೩ನೇ ಸೌತ್ ಇಂಡಿಯನ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯ ಕಥಾ ಹಾಗೂ ಫೈಟ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಅಲ್ಲದೆ ೧೦ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದು, ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ. ಕರಾಟೆ ತರಬೇತುದಾರರಾದ ಪ್ರೇಮ್ ಹಾಗೂ ಮನೋಜ್ ರವರ ಪರಿಶ್ರಮ ಹೆಚ್ಚಿನದ್ದಾಗಿದೆ. ಯಾವುದೇ ಪ್ರತಿಫಲ ನಿರೀಕ್ಷೆ ಮಾಡದೆ ಸಮರ್ಪಿತ ಮನೋಭಾವನೆಯೊಂದಿಗೆ ತರಬೇತಿ ನೀಡುತ್ತಿದ್ದಾರೆ.
    ಈ ಮಕ್ಕಳಿಗೆ ಎಲ್ಲಾ ರೀತಿಯಿಂದಲೂ ಇನ್ನೂ ಹೆಚ್ಚಿನ ಪ್ರೋತ್ಸಾಹ ಲಭಿಸಿದ್ದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ವಿಶ್ವಾಸವಿದ್ದು, ಬಡ ಹಾಗೂ ಪ್ರತಿಭಾವಂತ ಮಕ್ಕಳ ಕ್ರೀಡಾ ಬೆಳವಣಿಗೆಗೆ ಈಗಾಗಲೇ ನಗರದ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ನಿರಂತರವಾಗಿ ಬೆಂಬಲ ನೀಡುತ್ತಿದ್ದು, ಇದರ ಜೊತೆಗೆ ದಾನಿಗಳು, ಸಮಾಜಸೇವಕರು, ಸಂಘ-ಸಂಸ್ಥೆಗಳು, ನಾಗರೀಕರು ಸಹ ಕೈಜೋಡಿಸಿ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸಹಕರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ಸಹ ಮನವಿ ಮಾಡಿದೆ.