ರಾಜೀವ್ ಗಾಂಧಿ ಮೆಮೊರಿಯಲ್ ಪ್ರೌಢಶಾಲೆ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ
ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ.ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್, ರಾಜೀವ್ ಗಾಂಧಿ ಮೆಮೊರಿಯಲ್ ಪ್ರೌಢಶಾಲೆ ಮಕ್ಕಳಿಗೆ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ವತಿಯಿಂದ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ.ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್, ರಾಜೀವ್ ಗಾಂಧಿ ಮೆಮೊರಿಯಲ್ ಪ್ರೌಢಶಾಲೆ ಮಕ್ಕಳಿಗೆ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ವತಿಯಿಂದ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ಕ್ಲಬ್ ಅಧ್ಯಕ್ಷ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪನವರ ನೇತೃತ್ವದಲ್ಲಿ ಸುಮಾರು ೬೦ ರಿಂದ ೭೦ ಮಕ್ಕಳಿಗಳಿಗೆ ಬರವಣಿಗೆ ಪುಸ್ತಕ ವಿತರಿಸುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಲಾಯಿತು.
ಕ್ಲಬ್ ಖಜಾಂಚಿ ಸೋಲಾರ್ ನಾಗರಾಜ್, ಫ್ರಾನ್ಸಿಸ್, ನಾಗೇಂದ್ರಪ್ಪ, ಶಿವಾಜಿ ರಾವ್, ನಟರಾಜ್, ಕೆ.ಪಿ ಗಿರೀಶ್, ಶಿವಕುಮಾರ್ ಮತ್ತು ಮಧುಸೂದನ್, ಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್ ಹಾಗು ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
