ಎಸ್ಐಆರ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಗೆ ನಾಯಿ ಕಡಿತ
ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇನಗರದ ಖಾಜಿಮೊಹಲ್ಲಾ-ಕೋಟೆ ಏರಿಯಾ ಭಾಗದಲ್ಲಿ ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡರು .
ಭದ್ರಾವತಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇನಗರದ ಖಾಜಿಮೊಹಲ್ಲಾ-ಕೋಟೆ ಏರಿಯಾ ಭಾಗದಲ್ಲಿ ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ.
ನಗರಸಭೆ 5ನೇ ವಾರ್ಡಿನ ಖಾಜಿಮೊಹಲ್ಲಾ-ಕೋಟೆ ಏರಿಯಾ 3ನೇ ತಿರುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತಗಟ್ಟೆ ಅಧಿಕಾರಿ ರಹಮತುಲ್ಲಾ ಅವರ ಕಾಲಿಗೆ ಮನೆಯೊಂದರ ನಾಯಿ ಕಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಇವರು ತಕ್ಷಣ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

.jpeg)