ಆ.೨ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಭದ್ರಾವತಿ : ಹಳೇನಗರದ ಭಾವಸಾರ ಕ್ಷತ್ರೀಯ ಸಮಾಜದಿಂದ ಆ.೨ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಮಹಾತ್ಮಗಾಂಧಿ ರಸ್ತೆ(ತರೀಕೆರೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಶಿವಮೊಗ್ಗ ನಂಜಪ್ಪ ಲೈಫ್‌ಕೇರ್ ಹಾಗು ಆದರ್ಶ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಶಿಬಿರದಲ್ಲಿ ಉಚಿತ ಹೃದಯ ರೋಗ, ಮಧುಮೇಹ, ರಕ್ತದೊತ್ತಡ, ಬೆನ್ನುಹುರಿ ಹಾಗು ಮೂಲೆ ಮತ್ತು ಕಣ್ಣುಗಳಿಗೆ ಸಂಬಂಧಿಸಿದ ತಪಾಸಣೆ ನಡೆಯಲಿದೆ. ಶಿಬಿರದಲ್ಲಿ ಖ್ಯಾತ ಮೂಳೆಚಿಕಿತ್ಸೆ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಎ.ಸಿ ಪ್ರೇಮರಾಜ್‌ರವರು ರೋಬೊಟೆಕ್ ಸಹಾಯದಿಂದ ಮಂಡಿ ಚಿಪ್ಪು ಮರುಜೋಡಣೆ, ಬೆನ್ನುಮೂಳೆ, ಕಾಲು ಮತ್ತು ಪಾದದ ಶಸ್ತ್ರ ಚಿಕಿತ್ಸೆ, ಮಕ್ಕಳ ಮೂಳೆ ಚಿಕಿತ್ಸೆಗೆ ಸಂಬಂಧಿಸಿದ ವಿಶೇಷ ಸಮಾಲೋಚನೆ ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರರಾವ್ ಕೋರಿದ್ದಾರೆ.
