ಮಂಗಳೂರು ಬಿ.ಸಿ ರೋಡ್ ಯುವತಿ ಹತ್ಯೆ ಪ್ರಕರಣ :
ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದಿರುವ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಖಂಡಿಸಿ ಆರೋಪಿ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಮಹಿಳೆಯರ ಸುರಕ್ಷತೆ ಬಲಪಡಿಸುವಂತೆ ಆಗ್ರಹಿಸಿ ಭದ್ರಾವತಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಮಹಿಳಾ ಘಟಕದಿಂದ ಶನಿವಾರ ತಹಸೀಲ್ದಾರ್ ಪ್ರದೀಪ್ ದೇವಗಿರಿರವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ : ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದಿರುವ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಖಂಡಿಸಿ ಆರೋಪಿ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಮಹಿಳೆಯರ ಸುರಕ್ಷತೆ ಬಲಪಡಿಸುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಮಹಿಳಾ ಘಟಕದಿಂದ ಶನಿವಾರ ತಹಸೀಲ್ದಾರ್ ಪ್ರದೀಪ್ ದೇವಗಿರಿರವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.
ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಅತ್ಯಂತ ದುಃಖಕರ ಹಾಗೂ ಖಂಡನೀಯವಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ಆತಂಕವನ್ನುಂಟುಮಾಡುತ್ತಿದ್ದು, ಅಲ್ಲದೆ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
ಈ ಪ್ರಕರಣದಲ್ಲಿ ಬಂಧಿತ ಆರೋಪಿಯ ವಿರುದ್ಧ ಕಾನೂನಿನ ಪ್ರಕಾರ ತ್ವರಿತ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸರ್ಕಾರದ ಮೂಲಕ ಸೂಕ್ತ ನಿರ್ದೇಶನ ನೀಡಬೇಕು. ಅಲ್ಲದೆ, ರಾಜ್ಯದಾದ್ಯಂತ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿಯಲ್ಲಿ ಕೋರಲಾಗಿದೆ.
ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ನ್ಯಾಯಾಲಯದಲ್ಲಿ ಪರಿಣಾಮಕಾರಿಯಾಗಿ ವಿಚಾರಣೆ ನಡೆಸುವಂತೆ ಕ್ರಮ ಕೈಗೊಳ್ಳಬೇಕು. ಕಾನೂನಿನ ಪ್ರಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಬಸ್ ನಿಲ್ದಾಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಪೊಲೀಸ್ ಗಸ್ತು ಮತ್ತು ಭದ್ರತಾ ವ್ಯವಸ್ಥೆಯನ್ನು ಬಲಪಡಿಸಬೇಕು.
ಮಹಿಳೆಯರ ಸುರಕ್ಷತೆಗೆ ಸಿಸಿಟಿವಿ, ತುರ್ತು ಸಹಾಯವಾಣಿ ಹಾಗೂ ಇತರ ಭದ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಮನವಿಯಲ್ಲಿ ಸಲಹೆ ವ್ಯಕ್ತಪಡಿಸಲಾಗಿದೆ.
ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಮಹಿಳಾ ಘಟಕದ ಅಧ್ಯಕ್ಷೆ ವಾಣಿ ರವಿಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
